ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಉಪತಳಿ BF7 ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದ್ದು ಸಂಭಾವ್ಯ ನಾಲ್ಕನೇ ಅಲೆಯನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತರಲು ಚಿಂತನೆ ನಡೆಸಿದೆ.
ಇನ್ನು ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಹತ್ವದ ನಿರ್ಧಾರ ಮಾಡಿದ್ದು ಶನಿವಾರದಿಂದ ಬಿಎಂಟಿಸಿ ಬಸ್‌ನಲ್ಲಿ ಒಡಾಡುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.
ಮಾಸ್ಕ್ ಹಾಕದ ಪ್ರಯಾಣಿಕರಿಗೆ ಮಾಸ್ಕ್ ಹಾಕುವಂತೆ ನಿರ್ವಾಹಕರು ಸಲಹೆ ನೀಡಬೇಕು ಮತ್ತು ಪ್ರತಿದಿನ ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಲುವಂತೆ ಮನವಿ ಮಾಡುವಂತೆ ಸಂಸ್ಥೆ ಆದೇಶ ಹೊರಡಿಸಿದೆ.