
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ ಕೊಟ್ಟಿದ್ದಾರೆ. ಶಿಲ್ಪಾಶೆಟ್ಟಿ
ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ತಾಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಪಾಲ್ಗೊಂಡಿದ್ದಾರೆ
ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್ ಕುಂದ್ರಾ ಮತ್ತು ಸಮಿಷಾ ಕುಂದ್ರಾ ಮತ್ತು ತಾಯಿ ಸುನಂದಾ ಶೆಟ್ಟಿ ಮತ್ತು ಕುಟುಂಬದವರು ಜತೆಯಲ್ಲಿದ್ದರು. ಮೂಲತಃ ಮಂಗಳೂರಿನವರಾಗಿರುವುದರಿಂದ ನಟಿ ಶಿಲ್ಪಾ ಕುಟುಂಬದ ಕಾರ್ಯಕ್ರಮಗಳು, ಭೂತಾರಾದನೆ, ದೈವ ದೇವರ ಆರಾಧನೆಗೆ, ಆಗಾಗ ಬರುತ್ತಿರುತ್ತಾರೆ.ಕಳೆದ 2023ರ ಏಪ್ರಿಲ್ನಲ್ಲಿ ಪತಿ ರಾಜ್ ಕುಂದ್ರ, ಮಕ್ಕಳಾ ವಿಯಾನ್ ಮತ್ತು ಸಮಿಷಾ, ಸಹೋದರಿ ನಟಿ ಶಮಿತಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿ ಹಾಗೂ ಕುಟುಂಬದ ಸದಸ್ಯರ ಜೊತೆಗೆ ದೇವರ ದರ್ಶನ ಪಡೆದಿದ್ದರು. ತಮಗೆ ಹೆಣ್ಣು ಮಗು ಬೇಕು. ಹೆಣ್ಣು ಮಗು ಜನಿಸಿದರೆ ಕಟೀಲು ದುರ್ಗಾ ಪರಮೇಶ್ವರಿಗೆ ಸೀರೆಯನ್ನು ಕಾಣಿಕೆ ರೂಪದಲ್ಲಿ ನೀಡುವುದಾಗಿ ಶಿಲ್ಪಾ ಶೆಟ್ಟಿ ಹರಕೆ ಹೊತ್ತಿದ್ದರಂತೆ. ಅದೇ ರೀತಿ ಅಂದು ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ತಮ್ಮ ಹರಕೆಯನ್ನು ತೀರಿಸಿದ್ದರು.