ಬೆಂಗಳೂರಲ್ಲಿ (Bengaluru) ಏರೋ ಇಂಡಿಯಾ ಏರ್ ಶೋ (Aero india air show) ಹೊತ್ತಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kemoegowda international airport) ಬಾಂಬ್ ಬೆದರಿಕೆ ಇಮೇಲ್ ಬಂದಿದೆ.ಫೆಬ್ರವರಿ 8 ನೇ ತಾರೀಕು ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಏರ್ಪೋರ್ಟ್ ಗೆ ಆಗಮಿಸುವ ವಿಮಾನಗಳಿಗೆ ಡ್ರೋನ್ ಮುಖಾಂತರ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು ,ಚೆನ್ನೈ ಹಾಗೂ ಕೇರಳದಿಂದ ಬರುವ ವಿಮಾನಗಳಿಗೆ ಈ ರೀತಿ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. mahanteshs6699@proton.mi ಎಂಬುವ ಇಮೇಲ್ ವಿಳಾಸದಿಂದ ಬೆದರಿಕೆ ಇಮೇಲ್ ಬಂದಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ.ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ.ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡೋದಾಗಿ ಬೆದರಿಕೆ ಇಮೇಲ್ ನಲ್ಲಿ ಉಲ್ಲೇಖಿಸಲಾಗಿದೆ.
ಏರ್ ಶೋ ನಡೆಯುತ್ತಿರುವ ಸಂದರ್ಭದಲ್ಲಿ ಬೆದರಿಕೆ ಬಂದ ಹಿನ್ನಲೆ ಭದ್ರತೆ ಹೆಚ್ಚಿಸಿರುವ ಪೊಲೀಸರು ಬಿ ಎನ್ ಎಸ್ 125, 351, 353 ಅಡಿ ಎಫ್ಐಆರ್ ದಾಖಲು ಮಾಡಿದ್ದಾರೆ. ಬೆಂಗಳೂರು ಏರ್ ಪೋರ್ಟ್ ಪೊಲೀಸರಿಂದ ಮುಂದುವರೆದ ತನಿಖೆ ಮುಂದುವರೆದಿದ್ದು, ಇಮೇಲ್ ಮೂಲ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.