• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ : ಪ್ರಧಾನಿ ಮೋದಿ, ಅಮಿತ್ ಶಾ ಟಾರ್ಗೆಟ್‌..!

ಎಸ್. ಜೈಶಂಕರ್, ದೆಹಲಿ ಸಿಎಂ ರೇಖಾ ಗುಪ್ತಾ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಸೇರಿದಂತೆ ಹಲವರ ಟಾರ್ಗೆಟ್..!

ಪ್ರತಿಧ್ವನಿ by ಪ್ರತಿಧ್ವನಿ
March 24, 2026
in Top Story, ಇದೀಗ, ದೇಶ, ರಾಜಕೀಯ
0
ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ : ಪ್ರಧಾನಿ ಮೋದಿ, ಅಮಿತ್ ಶಾ ಟಾರ್ಗೆಟ್‌..!
Share on WhatsAppShare on FacebookShare on Telegram

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಹಲವು ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ದೆಹಲಿಯ ವಿಧಾನಸಭೆಗೆ ಬಾಂಬ್ ಬೆದರಿಕೆ ಬಂದಿದೆ. ಇಮೇಲ್‌ನಲ್ಲಿ ಬಂದಿರುವ ಬೆದರಿಕೆಯ ಪತ್ರದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ADVERTISEMENT
Assembly Session : ಇವಿಎಂ ಆಧಾರಿತ ಚುನಾವಣಾ ಪ್ರಕ್ರಿಯೆ ಮೇಲೆ ದೇಶದೆಲ್ಲೆಡೆ ಅನುಮಾನ ಇದೆ..!

ಮುಖ್ಯವಾಗಿ ದೆಹಲಿ ವಿಧಾನಸಭೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಧಿಕಾರಿಗಳು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.  ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಕಳುಹಿಸಲಾದ ಇಮೇಲ್‌ನಲ್ಲಿ ವಿಧಾನಸಭೆ ಕಟ್ಟಡ ಮತ್ತು ವಿಧಾನಸಭಾ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವ ಬೆದರಿಕೆ ಒಡ್ಡಲಾಗಿದೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಸೇರಿದಂತೆ ಹಲವು ನಾಯಕರ ಹೆಸರುಗಳನ್ನು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದ್ದು, ದೆಹಲಿ ಪೊಲೀಸರು, ಬಾಂಬ್‌ ನಿಷ್ಕ್ರೀಯದಳ ಫುಲ್‌ ಅಲರ್ಟ್‌ ಆಗಿದೆ.

ಇದನ್ನೂ ಓದಿ : ಗುಜರಾತ್‌ನಲ್ಲಿ ಇಂಧನಕ್ಕೆ ಪರದಾಟ : “ನೋ ಸ್ಟಾಕ್‌” ಬೋರ್ಡ್ ಕಂಡು ಕಂಗಾಲಾದ ವಾಹನ ಸವಾರರು..

ಇಂದು ಬೆಳಿಗ್ಗೆ 7:28 ರ ಸುಮಾರಿಗೆ ವಿಧಾನಸಭೆ ಕಚೇರಿಗೆ ಮೊದಲ ಬೆದರಿಕೆ ಇಮೇಲ್ ಬಂದಿದ್ದು, ಕೆಲವೇ ನಿಮಿಷಗಳ ನಂತರ ಸ್ಪೀಕರ್‌ಗೆ ನೇರವಾಗಿ ಮತ್ತೊಂದು ಬೆದರಿಕೆ ಇಮೇಲ್ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಮೇಲ್‌ ಸ್ವೀಕರಿಸಿದ ತಕ್ಷಣವೇ ಅಗತ್ಯ ಭದ್ರತಾ ಕ್ರಮಗಳನ್ನು ದೆಹಲಿ ಪೊಲೀಸರು ಕೈಗೊಂಡಿದ್ದಾರೆ.

ವಿಧಾನಸಭೆ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಲು ಪೊಲೀಸ್ ತಂಡಗಳು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಸ್ನಿಫರ್ ನಾಯಿಗಳನ್ನು ನಿಯೋಜಿಸಲಾಗಿದೆ. ಆದರೆ ಈ ಸಮಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಆದರೂ ಸಹ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರಿ ಕಚೇರಿ, ಕಟ್ಟಡಗಳಿಗೂ ಭದ್ರತೆಯನ್ನು ಏರಿಸಲಾಗಿದೆ.

ಯಾರು ಇಮೇಲ್‌ ಕಳುಹಿಸಿದ್ದಾರೆ, ಇದರ ಮೂಲವನ್ನು ಪತ್ತೆಹಚ್ಚಲು ತನಿಖೆ ಪ್ರಾರಂಭವಾಗಿದೆ. ವಂಚನೆ ಇಮೇಲ್‌ಗಳಿಗೆ ಬೆದರಿಕೆ ಸಂಬಂಧಿಸಿದೆಯೇ ಎಂದು ನಿರ್ಧರಿಸಲು ಸೈಬರ್ ತಜ್ಞರು ತಾಂತ್ರಿಕ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ದೆಹಲಿಯಲ್ಲಿ ಇದೇ ರೀತಿಯ ಬೆದರಿಕೆಗಳು ಜಾಸ್ತಿಯಾಗುತ್ತಿರುವುದರ ನಡುವೆಯೇ ಈ ಘಟನೆ ನಡೆದಿದೆ. ಇದಕ್ಕೂ ಮೊದಲು, ಹಲವಾರು ಶಾಲೆಗಳು ಮತ್ತು ಬ್ಯಾಂಕ್ ಶಾಖೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದವು, ಅವುಗಳಲ್ಲಿ ಹೆಚ್ಚಿನವು ವಂಚನೆಯಾಗಿದ್ದವು.

ಸರ್ಕಾರಿ ಸಂಸ್ಥೆಗಳು ಮತ್ತು ಉನ್ನತ ವ್ಯಕ್ತಿಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನಾಗರಿಕರು ಆತಂಕಕ್ಕೆ ಒಳಗಾಗದಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ. 

Tags: Bomb Security Scuadbomb threatCyber ExpertsDelhi assemblydelhi cm rekha guptaDelhi Leftinent GovernorDelhi Metro StationDelhi VidhansoudhaEmail ThreatExternal Affairs Minister S Jaishankarnational newsPratidhvaniPrime Minister Narendra ModTight SecurityUnion Home Minister Amit ShahVijendar Gupta
Previous Post

ಗುಜರಾತ್‌ನಲ್ಲಿ ಇಂಧನಕ್ಕೆ ಪರದಾಟ : “ನೋ ಸ್ಟಾಕ್‌” ಬೋರ್ಡ್ ಕಂಡು ಕಂಗಾಲಾದ ವಾಹನ ಸವಾರರು..

Next Post

ಆರ್‌ಸಿಬಿಯಿಂದ ಈ ಬಾರಿ 11ನೇ ನಂಬರ್‌ಗೆ ವಿಶೇಷ ಗೌರವ : ಕಾರಣವೇನು ಗೊತ್ತಾ..?

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ಆರ್‌ಸಿಬಿಯಿಂದ ಈ ಬಾರಿ 11ನೇ ನಂಬರ್‌ಗೆ ವಿಶೇಷ ಗೌರವ : ಕಾರಣವೇನು ಗೊತ್ತಾ..?

ಆರ್‌ಸಿಬಿಯಿಂದ ಈ ಬಾರಿ 11ನೇ ನಂಬರ್‌ಗೆ ವಿಶೇಷ ಗೌರವ : ಕಾರಣವೇನು ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada