ಬೆಂಗಳೂರಿನ (Bengaluru) ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ (Email) ಬಂದಿದೆ. ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹೋಟೆಲ್ ಗೆ ಈ ರೀತಿ ಬಿಂಬ ಬೆದರಿಕೆ ಹಾಕಲಾಗಿದೆ.

ಬೆಂಗಳೂರಿನ ಸಂಪಂಗಿ ರಾಮನಗರ ಠಾಣಾ ವ್ಯಾಪ್ತಿಯ ಐಬಿಐಎಸ್ (IBIS Hotel) ಹೋಟೆಲ್ ಗೆ ಬೆದರಿಕೆ ಇಮೇಲ್ ಬಂದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಸಂಪಂಗಿ ರಾಮನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಹೋಟೆಲ್ ನಲ್ಲಿ ತಂಗಿದ್ದ ಎಲ್ಲರನ್ನೂ ಹೊರಗಡೆ ಕಳುಹಿಸಿ ಸಂಪೂರ್ಣ ಹೋಟೆಲ್ ನ ಪರಿಶೀಲನೆ ನಡೆಸಿರುವ ಖಾಕಿ ಟೀಮ್ ಅಲರ್ಟ್ ಆಗಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಡಾಗ್ ಸ್ಕ್ವಾಡ್ ಸ್ಥಳದಲ್ಲಿ ಬೀಡುಬಿಟ್ಟಿವೆ.












