ಬೆಂಗಳೂರು : ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪದ ನಡುವೆಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ಪರಸ್ಪರ ಭೇಟಿಯಾದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ.
— Basavaraj S Bommai (@BSBommai) June 14, 2023
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು…
ಇದೀಗ ಈ ವಿಚಾರವಾಗಿ ಟ್ವೀಟ್ ಮೂಲಕ ಸ್ವತಃ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ಬರೆದುಕೊಂಡಿದ್ದಾರೆ.
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ.
ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.