Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬೊಮ್ಮಾಯಿ, ಯಡಿಯೂರಪ್ಪ, ಮೋದಿ ಯಾರಾದರೂ ರೈತರ ಸಾಲ ಮನ್ನಾ ಮಾಡಿದ್ದಾರ?

ಪ್ರತಿಧ್ವನಿ

ಪ್ರತಿಧ್ವನಿ

February 4, 2023
Share on FacebookShare on Twitter

ಬೀದರ್‌ ಜಿಲ್ಲೆಯ ಔರಾದ್‌ ನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಹೇಳಿಕೆ

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಯನ್ನು ನಿನ್ನೆಯಿಂದ ಆರಂಭ ಮಾಡಿದ್ದೇನೆ. ಚುನಾವಣೆಗೆ ಹೆಚ್ಚು ಸಮಯ ಉಳಿದಿಲ್ಲ ಎಂಬ ಕಾರಣಕ್ಕೆ ಪಕ್ಷದ ನಾಯಕರು ಎರಡು ತಂಡಗಳಾಗಿ ಮಾಡಿಕೊಂಡು ಯಾತ್ರೆಯನ್ನು ಮಾಡುತ್ತಿದ್ದೇವೆ. ಮೊದಲ ಹಂತದ ಯಾತ್ರೆಗೆ ಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಕೂಡ ಔರಾದ್‌ ನಲ್ಲಿ ಜನ ನಾವು ನಿಮ್ಮೊಂದಿಗೆ ನಾವು ಇರುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಇದರರ್ಥ ಜನ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ನೀಡಬೇಕು ಎಂಬ ತೀರ್ಮಾನ ಮಾಡಿದಂತಿದೆ.

ಬಿಜೆಪಿ ಸರ್ಕಾರದ ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾನ್‌ ಅವರಿಗೆ ಮೇಕೆ, ದನಗಳು ಎಂದರೆ ಯಾವು ಎಂಬುದೇ ಗೊತ್ತಿಲ್ಲ. ಸದನದಲ್ಲಿ ನನ್ನ ಪ್ರಶ್ನೆಗೆ ಕೂಡ ತಪ್ಪು ತಪ್ಪಾಗಿ ಲಿಖಿತ ಉತ್ತರ ನೀಡಿದ್ದರು. ಅವರ ವಿರುದ್ಧ ಸದನದ ಹಕ್ಕು ಚ್ಯುತಿ ಮಂಡಿಸಬಹುದಿತ್ತು ಆದರೆ ನೀನು ಪೆದ್ದ ಆಗಿರುವ ಕಾರಣಕ್ಕೆ ನಿನ್ನ ವಿರುದ್ಧ ಯಾವುದೇ ನೋಟಿಸ್‌ ನೀಡುವುದಿಲ್ಲ ಎಂದಿದ್ದೆ. ಒಂದೇ ಪ್ರಶ್ನೆಗೆ ನೀಡಿರುವ ಎರಡು ಉತ್ತರದಲ್ಲಿ 15 ಲಕ್ಷ ಜಾನುವಾರುಗಳ ಸಂಖ್ಯೆಯಲ್ಲಿ ವ್ಯತ್ಯಾಸ ಇತ್ತು, ಇಷ್ಟು ಜಾನುವಾರುಗಳನ್ನು ನೀನೇ ತಿಂದ್ಯನಪ್ಪಾ ಎಂದು ಕೇಳಿದ್ದೆ. ಚರ್ಮಗಂಟು ರೋಗ ಬಂದಿದೆ, ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿದ್ದೀರ ಎಂದು ಪ್ರಶ್ನೆ ಕೇಳಿದ್ದಕ್ಕೆ ಜನವರಿ 15ರೊಳಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸುತ್ತೇವೆ ಎಂದು ಹೇಳಿದ್ದರು, ಆದರೆ ಇನ್ನೂ 10 ರಿಂದ 15 ಲಕ್ಷ ಜಾನುವಾರಿಗಳಿಗೆ ಲಸಿಕೆ ಹಾಕಿಲ್ಲ. ಇಂಥಾ ಹಸಿ ಸುಳ್ಳು ಹೇಳೋರು ನಿಮ್ಮ ಶಾಸಕರಾಗಬೇಕ?

ಔರಾದ್‌ ನಿಂದ 27 ಜನ ಅರ್ಜಿ ಹಾಕಿದ್ದಾರೆ. ಎಲ್ಲರಿಗೂ ಟಿಕೇಟ್‌ ನೀಡಲು ಸಾಧ್ಯವಿಲ್ಲ. ಒಬ್ಬರಿಗೆ ಮಾತ್ರ ಟಿಕೇಟ್‌ ನೀಡಬಹುದು, ಟಿಕೇಟ್‌ ಸಿಗದೆ ಉಳಿದ 26 ಜನರು ಒಂದಾಗಿ ಕೆಲಸ ಮಾಡಿ ಪ್ರಭು ಚೌಹಾನ್‌ ಅವರನ್ನು ಸೋಲಿಸುವ ಕೆಲಸ ಮಾಡಬೇಕು. ಈ ಸಂಕಲ್ಪವನ್ನು ಇಂದಿನ ಸಮಾವೇಶದಲ್ಲಿ ಟಿಕೇಟ್ ಆಕಾಂಕ್ಷಿಗಳು ಮಾಡಬೇಕು.

ಬಿಜೆಪಿ ಪಕ್ಷ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿದ್ದಲ್ಲ, 113 ಸ್ಥಾನಗಳಲ್ಲಿ ಗೆದ್ದರೆ ಮಾತ್ರ ಆ ಸರ್ಕಾರಕ್ಕೆ ಜನಾಶೀರ್ವಾದ ಇದೆ ಎಂದರ್ಥ. ಕಳೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು 104, ಜೆಡಿಎಸ್‌ 37 ಮತ್ತು ಕಾಂಗ್ರೆಸ್‌ 80 ಸ್ಥಾನಗಳಲ್ಲಿ ಗೆದ್ದಿತ್ತು. ಕಾಂಗ್ರೆಸ್‌ ಪಕ್ಷ 38.18% ಮತ, ಬಿಜೆಪಿ 36.42% ಮತಗಳನ್ನು ಪಡೆದಿತ್ತು. ಬಿಜೆಪಿ ನಮಗಿಂತ ಕಡಿಮೆ ಪ್ರಮಾಣದ ಮತಗಳನ್ನು ಪಡೆದಿದ್ದರೂ ಹೆಚ್ಚು ಸ್ಥಾನಗಳಲ್ಲಿ ಗೆದ್ದಿತ್ತು. ಇದೇ ಪ್ರಜಾಪ್ರಭುತ್ವದ ವೈಶಿಷ್ಟ್ಯ. ಸರ್ಕಾರ ರಚನೆಗೆ ಯಡಿಯೂರಪ್ಪ ಅವರನ್ನು ಆಹ್ವಾನಿಸಿದ ರಾಜ್ಯಪಾಲರು, ಬಹುಮತ ಸಾಬೀತು ಮಾಡುವಂತೆ ತಿಳಿಸಿದರು. ಆದರೆ ಬಹುಮತ ಸಾಬೀತು ಮಾಡಲು ಸಾಧ್ಯವಾಗದ್ದರಿಂದ ಅವರ ಸರ್ಕಾರ ಬಿದ್ದುಹೋಯಿತು. ನಂತರ ನಾವು ಸರ್ಕಾರ ರಚನೆ ಮಾಡುವುದಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ, ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಕುಮಾರಸ್ವಾಮಿ ಸರ್ಕಾರ 1 ವರ್ಷ 2 ತಿಂಗಳಿಗೆ ಬಿದ್ದುಹೋಯಿತು. ಇದಕ್ಕೆ ಕಾರಣ ಕುಮಾರಸ್ವಾಮಿ ವೆಸ್ಟೆಂಡ್‌ ಹೋಟೆಲ್‌ ನಲ್ಲಿ ಉಳಿದುಕೊಂಡು ಶಾಸಕರು, ಸಚಿವರ ಭೇಟಿಗೆ ಅವಕಾಶ ನೀಡದಿರುವುದು.

ನಾಯಿ ಕಾದಿತ್ತು, ಅನ್ನ ಹಳಸಿತ್ತು ಎಂಬ ಗಾಧೆ ಮಾತಿನಂತೆ ಈ ಸಂದರ್ಭವನ್ನು ಕಾಯುತ್ತಿದ್ದ ಬಿಜೆಪಿಯವರು ಒಬ್ಬೊಬ್ಬ ಶಾಸಕರಿಗೆ 15 ರಿಂದ 20 ಕೋಟಿ ಹಣ ನೀಡಿ ಖರೀದಿಸಿ, ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆಪರೇಷನ್‌ ಕಮಲದ ಮೂಲಕ ಸರ್ಕಾರ ರಚನೆ ಮಾಡಿದರು. ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ ನಾವು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದ್ದೆವು. ಸಮ್ಮಿಶ್ರ ಸರ್ಕಾರವನ್ನು ಕುಮಾರಸ್ವಾಮಿ ಅವರಿಂದ ಉಳಿಸಿಕೊಳ್ಳಲಾಗಲಿಲ್ಲ. ಅಲ್ಲಮಪ್ರಭು ಅವರ ಮಾತಿನಂತೆ ಕೊಟ್ಟ ಕುದುರೆಯನ್ನು ಏರದವ ವೀರನೂ ಅಲ್ಲ, ಶೂರನೂ ಅಲ್ಲ, ಹೀಗೆ ಕುಮಾರಸ್ವಾಮಿಗೆ ಕೊಟ್ಟ ಅಧಿಕಾರವನ್ನು ಉಳಿಸಿಕೊಳ್ಳಲಾಗಲಿಲ್ಲ. ನಾನು ಈ ಹಿಂದೆ ಮುಖ್ಯಮಂತ್ರಿಯಾಗಿ ಪೂರ್ಣ 5 ವರ್ಷಗಳ ಕಾಲ ಆಡಳಿತ ನಡೆಸಿದ್ದೆ, ದೇವರಾಜ ಅರಸು ಅವರನ್ನು ಬಿಟ್ಟರೆ ಪೂರ್ಣಾವಧಿಗೆ ಆಡಳಿತ ನಡೆಸಿದ್ದು ನಾನು ಮಾತ್ರ.

ನಾನು ಮುಖ್ಯಮಂತ್ರಿಯಾಗಿರುವಾಗ 22 ಲಕ್ಷದ 27 ಸಾವಿರ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿದ್ದ 50,000 ವರೆಗಿನ ಒಟ್ಟು 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಬೊಮ್ಮಾಯಿ, ಯಡಿಯೂರಪ್ಪ, ಮೋದಿ ಯಾರಾದರೂ ರೈತರ ಸಾಲ ಮನ್ನಾ ಮಾಡಿದ್ದಾರ? ಈ ಬಿಜೆಪಿ ಸರ್ಕಾರ ಬರೀ ಲೂಟಿ ಮಾಡುತ್ತಿದೆ. ನಾವು ಬಾಲ್ಯದಲ್ಲಿ ಓದಿದ್ದ ಕಥೆ ಅಲಿಬಾಬಾ ಮತ್ತು 40 ಮಂದಿ ಕಳ್ಳರ ತಂಡಕ್ಕೆ ಈ ಸರ್ಕಾರವನ್ನು ಹೋಲಿಸಬಹುದು. 40% ಕಮಿಷನ್‌ ನೀಡಲಾಗದೆ 3 ಜನ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರು. ಇಂದು ವಿಧಾನಸೌಧದ ಗೋಡೆಗಳು ಲಂಚ, ಲಂಚ, ಲಂಚ ಎಂದು ಪಿಸುಗುಟ್ಟಲು ಆರಂಭ ಮಾಡಿದೆ.

ಈಶ್ವರಪ್ಪ ಮೊದಮೊದಲು ರಾಜೀನಾಮೆ ನೀಡಲು ಒಪ್ಪಿಲ್ಲ, ನಾವು ವಿಧಾನಸೌಧದ ಮುಂಭಾಗ ರಾತ್ರಿ ಹಗಲು ಪ್ರತಿಭಟನೆ ಮಾಡಿದ ಮೇಲೆ ಬೇರೆ ದಾರಿಯಿಲ್ಲದೆ ರಾಜೀನಾಮೆ ನೀಡಿದರು. ಈಗ ಮತ್ತೆ ಮಂತ್ರಿ ಆಗಬೇಕು ಎಂದು ಬಹಳಾ ಪ್ರಯತ್ನ ಮಾಡಿದ್ರು, ಆದರೆ ಅವರ ಹೈಕಮಾಂಡ್‌ ಒಪ್ಪಿಲ್ಲ ಎಂದು ಕಾಣುತ್ತೆ. ಕಾಮಗಾರಿಗೆ ಅನುಮೋದನೆ ನೀಡಲು, ಬಡ್ತಿ, ನೇಮಕಾತಿ, ವರ್ಗಾವಣೆ ಹೀಗೆ ಎಲ್ಲಾ ಕಡೆ ಲಂಚದಿಂದ ತುಂಬಿ ಹೋಗಿದೆ. ನಾನು 12 ವರ್ಷ ಹಣಕಾಸು ಸಚಿವನಾಗಿ ಕೆಲಸ ಮಾಡಿದ್ದೇನೆ. ಎನ್‌ಒಸಿ ಕೊಡಲು ನಾನು 5 ಪೈಸೆ ಲಂಚ ಪಡೆದಿದ್ದೆ ಎಂದು ಯಾರಾದರೂ ಹೇಳಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ.

ಈಗ ಅತ್ಯಂತ ಕೆಟ್ಟ, ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ. ಇದನ್ನು ನೀವು ಇಷ್ಟು ಕಾಲ ಸಹಿಸಿಕೊಂಡಿದ್ದೀರಿ. ಮುಂದೆ ಮೇ ತಿಂಗಳಿನಲ್ಲಿ ಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೇರು ಸಹಿತ ಕಿತ್ತು, ಕಾಂಗ್ರೆಸ್‌ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸುವ ಕೆಲಸ ಮಾಡಬೇಕು ಎಂದು ತಮ್ಮಲ್ಲಿ ಕೈಮುಗಿದು ಮನವಿ ಮಾಡುತ್ತೇನೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಕಿರುತೆರೆಯಲ್ಲಿ ಬರ್ತಿದೆ ʻವೀಕೆಂಡ್‌ ವಿತ್‌ ರಮೇಶ್‌ʼ… ಮೊದಲ ಸಾಧಕರು ಯಾರು..?
ಸಿನಿಮಾ

ʻವೀಕೆಂಡ್‌ ವಿತ್‌ ರಮೇಶ್‌ʼ ಸೀಸನ್‌ 5ರ ಮೊದಲ ಅತಿಥಿ ಯಾರ್‌ ಗೊತ್ತಾ..?

by ಪ್ರತಿಧ್ವನಿ
March 22, 2023
ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ
Top Story

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

by ನಾ ದಿವಾಕರ
March 20, 2023
ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02
Top Story

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

by ಕೃಷ್ಣ ಮಣಿ
March 24, 2023
ʼಕೆ ಜಿ ಎಫ್ʼ ,  ʼಕಾಂತಾರ ʼ ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ “ಕಬ್ಜ”..  KABZAA ‘Box Office’ Collection..!
ಸಿನಿಮಾ

ಬಾಕ್ಸ್‌ ಆಫೀಸ್‌ನಲ್ಲಿ ಕಬ್ಜ ಹವಾ.. ಚಿತ್ರತಂಡದಿಂದ ಸೆಲೆಬ್ರೇಷನ್‌..!

by ಪ್ರತಿಧ್ವನಿ
March 20, 2023
ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ
Top Story

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ

by ಪ್ರತಿಧ್ವನಿ
March 24, 2023
Next Post
BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ 969 ಕೋಟಿ ರೂ.                                      ಬೃಹತ್  ಅವ್ಯವಹಾರ ಬೆನ್ನತ್ತಿದ ED

BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ 969 ಕೋಟಿ ರೂ. ಬೃಹತ್ ಅವ್ಯವಹಾರ ಬೆನ್ನತ್ತಿದ ED

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದ ರಾಮ್ ಚರಣ್ – ದಿನೇ ದಿನೇ ಹೆಚ್ಚಾಗ್ತಿದೆ ಮೆಗಾ ಪವರ್ ಸ್ಟಾರ್ ಕ್ರೇಜ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದ ರಾಮ್ ಚರಣ್ - ದಿನೇ ದಿನೇ ಹೆಚ್ಚಾಗ್ತಿದೆ ಮೆಗಾ ಪವರ್ ಸ್ಟಾರ್ ಕ್ರೇಜ್

ಚುನಾವಣಾ ಪ್ರಣಾಳಿಕೆಗಳಂತಾಗುತ್ತಿರುವ ಮುಂಗಡ ಪತ್ರಗಳು

ಚುನಾವಣಾ ಪ್ರಣಾಳಿಕೆಗಳಂತಾಗುತ್ತಿರುವ ಮುಂಗಡ ಪತ್ರಗಳು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist