Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ

ಪ್ರತಿಧ್ವನಿ

September 19, 2023
Share on FacebookShare on Twitter

“ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ, ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ

ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

“ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು” ಎಂಬ ಬೊಮ್ಮಾಯಿ ಅವರ ಸಲಹೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಉತ್ತರಿಸಿದ್ದು ಹೀಗೆ;

ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌

“ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಆದರೆ ಸುಪ್ರೀಂ ಕೋರ್ಟ್ ಅನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ನೀರು ಬಿಡಬೇಡಿ ಎಂದು ಬೊಮ್ಮಾಯಿ ಹೇಳುತ್ತಾರೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದರೆ, ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ?

ಬೊಮ್ಮಾಯಿ ಅವರು ರಾಜಕಾರಣ ಬದಿಗಿಡಲಿ. ಕೂಡಲೇ ಪ್ರಧಾನಿಗಳಿಗೆ ಮಧ್ಯಸ್ತಿಕೆ ವಹಿಸುವಂತೆ ಒತ್ತಡ ತರಲಿ. ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತವನ್ನು ಅವರು ಮೊದಲು ಕಾಪಾಡಲಿ, ರಾಜಕಾರಣ ಬದಿಗಿಡಲಿ.

ಬಸವರಾಜ ಬೊಮ್ಮಾಯಿ

ನಾನು ಶೀಘ್ರದಲ್ಲೇ ದೆಹಲಿಗೆ ಹೋಗಲಿದ್ದು, ಸಂಸದರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇನೆ.‌ ಮಧ್ಯಸ್ತಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ.”

ದೇವೇಗೌಡರು ಸರಿಯಾಗಿ ಹೇಳಿದ್ದಾರೆ

ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿದ ಎಚ್.ಡಿ.ದೇವೇಗೌಡರು “ನ್ಯಾಯಲಯದ ಹೊರಗಡೆ ಇತ್ಯರ್ಥ ಮಾಡಿಕೊಳ್ಳಿ” ಎಂದು ಸಲಹೆ ನೀಡಿರುವುದು ಸರಿಯಾಗಿದೆ. ಹಿರಿತನದ ಅನುಭವದ ಮೇಲೆ ಅವರು ಮಾತನಾಡಿದ್ದಾರೆ. ಅವರ ಸಲಹೆ ಸ್ವೀಕಾರ್ಹವಾಗಿದೆ.

ಕಾವೇರಿ

ನೀರಾವರಿ ಸಚಿವರಾಗಿದ್ದ ಬೊಮ್ಮಾಯಿ ಅವರು ಉಪಯುಕ್ತ ಸಲಹೆ ನೀಡಲಿ. ಅವರೇ ನೇಮಕ ಮಾಡಿದ ಕಾನೂನು ತಜ್ಞರೇ ಈಗಲೂ ಇದ್ದಾರೆ. ಅವರ ಮಾತನ್ನು ಕೇಳಬೇಕೊ ಅಥವಾ ಇವರ ಮಾತನ್ನು ಕೇಳಬೇಕೊ? ಒಳ್ಳೆ ಸಲಹೆ ನೀಡಿದರೆ ಮಾತ್ರ ಅವರ ಮಾತನ್ನು ಕೇಳುತ್ತೇವೆ.”

ಹಿರಿಯ ವಕೀಲರಾದ ನಾರಿಮನ್ ಅವರ ಸಲಹೆ ಕೇಳಿದ್ದೀರಾ ಎನ್ನುವ ಪ್ರಶ್ನೆಗೆ “ಈಗ ಇರುವ ತಂಡದಲ್ಲಿ ಅವರ ಶಿಷ್ಯರೇ ಇದ್ದಾರೆ, ಸಲಹೆ ಕೇಳಿದ್ದೇವೆ. ಇದರ ಬಗ್ಗೆ ಆನಂತರ ಮಾತನಾಡುವೆ” ಎಂದರು.

RS 500
RS 1500

SCAN HERE

Pratidhvani Youtube

«
Prev
1
/
5556
Next
»
loading
play
Dinesh Gundu Rao | ಅವಶ್ಯಕವಾಗಿ ನಮ್ಮ ಆರೋಗ್ಯವನ್ನ ನಾವೇ ಹಾಳು ಮಾಡಿಕೊಳ್ತಾ ಇದ್ದೀವಿ..!
play
"ಬ್ಯಾರಿ ಸೌಹಾರ್ಧ ಭವನ” ಉದ್ಘಾಟನೆ CM ಸಿದ್ರಾಮಯ್ಯ DK ಶಿವಕುಮಾರ್ K J ಜಾರ್ಜ್ ಭಾಷಣ | @PratidhvaniNews
«
Prev
1
/
5556
Next
»
loading

don't miss it !

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ
Top Story

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

by ಪ್ರತಿಧ್ವನಿ
September 25, 2023
ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ  ಮಾಡಿದ್ದ ಆರೋಪಿಗಳ ಬಂಧನ..!
ಇದೀಗ

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ ಮಾಡಿದ್ದ ಆರೋಪಿಗಳ ಬಂಧನ..!

by ಪ್ರತಿಧ್ವನಿ
September 28, 2023
ಲೋಕಸಭೆ ಮೇಲೆ ಕಾಂಗ್ರೆಸ್​ ಕಣ್ಣು.. ಒಂದೇ ಸೂತ್ರ ಎರಡು ಚುನಾವಣೆ..
Top Story

ಲೋಕಸಭೆ ಮೇಲೆ ಕಾಂಗ್ರೆಸ್​ ಕಣ್ಣು.. ಒಂದೇ ಸೂತ್ರ ಎರಡು ಚುನಾವಣೆ..

by ಕೃಷ್ಣ ಮಣಿ
September 29, 2023
ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ
Top Story

ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ

by ಪ್ರತಿಧ್ವನಿ
September 24, 2023
ಜಟಿಲ ಸಿಕ್ಕುಗಳ ನಡುವೆ ರಂಗಭೂಮಿಯ ಆದ್ಯತೆಗಳು
ಅಂಕಣ

ಜಟಿಲ ಸಿಕ್ಕುಗಳ ನಡುವೆ ರಂಗಭೂಮಿಯ ಆದ್ಯತೆಗಳು

by ನಾ ದಿವಾಕರ
September 25, 2023
Next Post
ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು “ನಾದ ಯೋಗಿ” ಯೂಟ್ಯೂಬ್ ಚಾನಲ್

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು "ನಾದ ಯೋಗಿ" ಯೂಟ್ಯೂಬ್ ಚಾನಲ್

“ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”

"ಕರ್ನಾಟಕದ ಅಳಿಯ" ನ ಹಾಡು ನೋಡಿ ಥ್ರಿಲ್ ಆದ "ಮುದ್ದಿನ ಅಳಿಯ"

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist