ಸ್ಯಾಂಡಲ್ ವುಡ್ ಅಂಗಳದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಚಿತ್ರ ಬಾಂಡ್ ರವಿ. ಟೀಸರ್ ಮೂಲಕ ಎಲ್ಲರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರದ ಮೇಲೆ ಸಿನಿರಸಿಕರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಕೆಲಸ ಮುಗಿಸಿ ಬಿಡುಗಡೆಗೆ ಎದುರು ನೋಡುತ್ತಿರುವ ಚಿತ್ರತಂಡ ಚಿತ್ರದ ಮೊದಲ ಸಾಂಗ್ ಬಿಡುಗಡೆ ಮಾಡಿದೆ.
ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯದ ‘ಮಜಾ ಮಜಾ ಮಾಡು ಬಾ ಹಾಡಿಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ದನಿಯಾಗಿದ್ದು, ಮನೋಮೂರ್ತಿ ಸಂಗೀತ ನೀಡಿದ್ದಾರೆ.

ಬಾಂಡ್ ರವಿ ಆಕ್ಷನ್ ಲವ್ ಸ್ಟೋರಿ ಸಿನಿಮಾ. ಯುವ ಪ್ರತಿಭೆ ಪ್ರಜ್ವಲ್ ಎಸ್.ಪಿ ಈ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನರಸಿಂಹಮೂರ್ತಿ.ವಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ.
ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದು, ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ಗೋವಿಂದೇ ಗೌಡ. ಹಂಸ, ಮಿಮಿಕ್ರಿ ಗೋಪಿ, ಪವನ್, ಕಾಮಿಡಿ ಕಿಲಾಡಿ ಸಂತೋಷ್, ರವಿಪ್ರಕಾಶ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್ ರಾಜ್ ಸಂಭಾಷಣೆ, ಬಿ. ಧನಂಜಯ ನೃತ್ಯ ನಿರ್ದೇಶನ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.