ಮೈಸೂರು;ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದಲ್ಲಿ ನಡೆದಿದೆ.ಇವೀನ್ (7) ವಿದ್ಯುತ್ ಸ್ಪರ್ಶದಿಂದ ಮೃತ ಬಾಲಕ.
ಬಾಲಕ ಗ್ರಾಮದ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಮಿನರಲ್ ವಾಟರ್ ತುಂಬಿಸುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ಈ ವೇಳೆ ವಿದ್ಯುತ್ ಶಾಕ್ ಹೊಡೆದಿದೆ.
ವಿಷಯ ತಿಳಿದ ಕೂಡಲೇ ಬಾಲಕನ್ನು ನಂಜನಗೂಡಿನ ಕೃಷ್ಣ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ ಎಂದು ವೈದ್ಯರು ತಿಳಿದ್ದಾರೆ.











