• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ರಹ್ಮ ಕಮಲ’ ಟ್ರೈಲರ್ ಬಿಡುಗಡೆ! ಇದು ಸಿದ್ದು ಪೂರ್ಣಚಂದ್ರ ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
August 1, 2026
in Top Story, ಸಿನಿಮಾ
0
ಬ್ರಹ್ಮ ಕಮಲ’ ಟ್ರೈಲರ್ ಬಿಡುಗಡೆ! ಇದು ಸಿದ್ದು ಪೂರ್ಣಚಂದ್ರ ಚಿತ್ರ
Share on WhatsAppShare on FacebookShare on Telegram

ಈ ಹಿಂದೆ ದಾರಿ ಯಾವುದಯ್ಯ ವೈಕುಂಠಕೆ ಚಿತ್ರದ ಮೂಲಕ ನಿರ್ದೇಶಕರಾಗಿ ಮನ್ನಣೆ ಗಳಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರ., ಮತ್ತೊಂದು ಸೂಕ್ಷ್ಮ ಕಥನಕ್ಕೆ ದೃಶ್ಯರೂಪ ನೀಡಿದ್ದಾರೆ. ನಮ್ಮ ನಡುವಿನ ಕೌಟುಂಬಿಕ ವ್ಯವಸ್ಥೆಯೊಳಗಿನ ಹೆಣ್ಣೊಬ್ಬಳ ಒಳತೋಟಿಗೆ ಕಣ್ಣಾದ ಆ ಕಥನವೀಗ ಬ್ರಹ್ಮಕಮಲ ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಗೆ ಅಣಿಗೊಂಡಿದೆ. ಇದೀಗ ಈ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡು, ಪ್ರೇಕ್ಷಕರ ವಲಯದಲ್ಲಿ ಚರ್ಚೆಗೆ ಅನುವು ಮಾಡಿಕೊಟ್ಟಿದೆ.

ADVERTISEMENT

ಸಾಮಾನ್ಯವಾಗಿ ಜನಪ್ರಿಯ ಅಲೆಗಳ ಸುತ್ತಲೇ ಸಿನಿಮಾ ನಿರ್ಮಾತೃಗಳ, ಪ್ರೇಕ್ಷಕರ ಚಿತ್ತ ನೆಟ್ಟಿರುತ್ತದೆ. ಆದರೆ, ಅದರ ಜೊತೆಜೊತೆಗೇ ಹೊಸಾ ಅಲೋಚನೆಯ, ಭಿನ್ನ ಕಥನಗಳು ಹುರಿಗೊಳ್ಳದಿದ್ದರೆ ಸಿನಿಮಾ ರಂಗ ನಿಂತ ನೀರಾಗುವ ಅಪಾಯವಿದೆ. ಅಂಥಾ ಅಪಾಯವೊಂದನ್ನು ದಾಟಿಕೊಳ್ಳುವ ವಾಹಕವಾಗಿ ಬ್ರಹ್ಮಕಮಲ ಚಿತ್ರದ ಟ್ರೈಲರ್ ಇದೀಗ ಚರ್ಚೆ ಹುಟ್ಟು ಹಾಕಿದೆ. ಹೆಣ್ಣು ಸಂಸಾರದ ಕಣ್ಣು ಎಂಬುದು ಪ್ರಸಿದ್ಧ ನಾಣ್ಣುಡಿ. ಆದರೆ, ಆ ಕಣ್ಣಲ್ಲಿ ಜಿನುಗುವ ಸುಪ್ತ ನೋವುಗಳನ್ನು ಗ್ರಹಿಸುವ ವ್ಯವಧಾನ ಈ ಸಮಾಜಕ್ಕಿದ್ದಂತಿಲ್ಲ. ಅಂಥಾದ್ದೊಂದು ಸೂಕ್ಷ್ಮ ಕಥನದೊಂದಿಗೆ ಈ ಸಿನಿಮಾವನ್ನು ಸಿದ್ದು ಪೂರ್ಣಚಂದ್ರ ರೂಪಿಸಿದ್ದಾರಂತೆ. ಅದರ ಸೂಕ್ಷ್ಮ ಅಂಶಗಳು ಸದರಿ ಟ್ರೈಲರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿವೆ.ನಮ್ಮಲ್ಲಿನ ಕೌಟುಂಬಿಕ ವ್ಯವಸ್ಥೆಯಲ್ಲಿ ಘಟಿಸುವ ಒಂದು ರಾತ್ರಿಯ ಕಥೆ ಬ್ರಹ್ಮಕಮಲವಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದೆ. ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬ್ರಹ್ಮ ಕಮಲಕ್ಕೆ ಭರಪೂರ ಮೆಚ್ಚುಗೆ ಸಿಕ್ಕಿದೆ. ಪ್ರೇಕ್ಷಕರ ಒತ್ತಾಯದ ಮೇರೆಗೆ ಮೂರು ಮೂರು ಪ್ರದರ್ಶನಗಳನ್ನು ಕಂಡಿದೆ. ಇಂಥಾ ಚಿತ್ರವೀಗ ಟ್ರೈಲರ್ ಮೂಲಕ ಸದ್ದು ಮಾಡಲಾರಂಭಿಸಿದೆ.

ಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಸಿದ್ದು ಪೂರ್ಣಚಂದ್ರ ನಿರ್ದೇಶನ ಮಾಡಿರುವ ಈ ಸಿನಿಮಾ ಪೂರ್ಣ ಚಂದ್ರ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಅದ್ವಿತಿ ಶೆಟ್ಟಿ, ಋತು ಚೈತ್ರ, ಲೋಕೇಂದ್ರ ಸೂರ್ಯ, ಬಾಲ ರಾಜ್ವಾಡಿ, ಮಮತಾ ರಾಹುತ್, ಪ್ರಮೀಳಾ ಸುಬ್ರಮಣ್ಯ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಲೋಕೇಂದ್ರ ಸೂರ್ಯ ಛಾಯಾಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ, ದೀಪು ಸಂಕಲನ, ನಾಗರತ್ನ ಕೆ.ಹೆಚ್ ನಿರ್ಮಾಣ ನಿರ್ವಹಣೆಯಲ್ಲಿ ಬ್ರಹ್ಮಕಮಲ ರೂಪುಗೊಂಡಿದೆ. ಪುಟ್ಟರಾಜು ಮತ್ತು ಪ್ರಮೀಳಾ ಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕ ಶೀಘ್ರದಲ್ಲಿಯೇ ಜಾಹೀರಾಗಲಿದೆ.

Tags: Adhvithi ShettyBrahma Kamal Kannada MovieBrahma Kamal MovieBrahma Kamal TrailerBrahma Kamal Trailer Releasekannada cinemaKannada Entertainment Newskannada film newskannada movie trailerlatest kannada moviesnew kannada moviePoornachandra Filmssandalwood newsSiddu PoornachandraSiddu Poornachandra Film
Previous Post

ಪ್ರಧಾನಿ ಮೋದಿ ಎದುರು ಡಿಕೆ ಶಿವಕುಮಾರ್ ವಿಶೇಷ ಮನವಿ

Next Post

ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾವುಕ ಮಾತು

Related Posts

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Top Story

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರನ್ನು ಒತ್ತಡ ಹೇರಿ ಹಾಗೂ ದಬಾಯಿಸಿ ರಾಜೀನಾಮೆ ಕೊಡಿಸಲಾಗಿದೆ...

Read moreDetails
ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾವುಕ ಮಾತು

ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾವುಕ ಮಾತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada