ಬಾಲಿವುಡ್ನ ಸ್ಟಾರ್ ದಂಪತಿಗಳಾದ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಚಿತ್ರವು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಮೊದಲು ರಣಬೀರ್ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಹಿಂದೂ ಪರ ಸಂಘಟನೆಗಳು ಚಿತ್ರವನ್ನ ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯ್ಕಾಟ್ ಬ್ರಹ್ಮಾಸ್ತ್ರ ಎಂಬ ಅಭಿಯಾನವನ್ನ ಶುರು ಮಾಡಿದ್ದವು.
ಆದರೆ, ಬಾಯ್ಕಾಟ್ ಬಿಸಿಯ ನಡುವೆಯೂ ಚಿತ್ರತಂಡ ಮೊದಲ ದಿನ ಉತ್ತಮ ಗಳಿಕೆ ಮಾಡುವಲ್ಲಿ ಯಶಸ್ವಿಯಾಗಿದೆ. ಮೊದಲ ದಿನ ಚಿತ್ರವು ಎಲ್ಲಾ ಭಾಷೆಗಳಿಂದ ಸೇರಿ 75 ಕೋಟಿ ಕಮಾಯಿ ಮಾಡಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ನಿರ್ಮಾಪಕ ಕರಣ್ ಜೋಹಾರ್ ಪ್ರೇಕ್ಷಕರಿಗೆ ಧ್ನ್ಯವಾದಗಳನ್ನು ತಿಳಿಸಿದ್ದಾರೆ.
ಇನ್ನು ಕೆಲವರು ಚಿತ್ರದ ಮೊದಲ ದಿನದ ಗಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು 400 ಕೋಟಿ ರೂಪಾಯಿಗು ಅಧಿಕ ಬಜೆಟ್ನಲ್ಲಿ ನಿರ್ಮಾಣವಾಗಿರುವ ಚಿತ್ದ ಮೊದಲ ದಿನದ ಗಳಿಕೆ ಸಮಾಧನಕರವಾಗಿಲ್ಲ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಇನ್ನು 2018ರಲ್ಲಿ ಪ್ರಾರಂಭವಾದ ಚಿತ್ರೀಕರಣವು 2022ರಲ್ಲಿ ಮುಕ್ತಾಯವಾಗಿದ್ದು ಚಿತ್ರದ ಕೇಸರಿಯಾ ಹಾಡು ಸಖತ್ ಸದ್ದು ಮಾಡಿದೆ.