ಬೆಂಗಳೂರು: ಸಿಎಂ ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ. ಆದರೆ ಈ ಬೆಳವಣಿಗೆ ಬಗ್ಗೆ ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ & ಡಿ.ಕೆ.ಶಿವಕುಮಾರ್ ಮಧ್ಯೆ ನಡೆಯುತ್ತಿರುವ ಮೀಟಿಂಗ್ ನಲ್ಲಿ ಏನು ನಡೆಯಲ್ಲ. ಅಲ್ಲಿ ಇಡ್ಲಿನೂ ಇಲ್ಲ, ದೋಸೆನೂ ಇಲ್ಲ, ಉಪ್ಪಿಟ್ಟೂ ಇಲ್ಲ. ಇದು ಬ್ರೇಕ್ ಫಾಸ್ಟ್ ಮೀಟಿಂಗ್ ಅಲ್ಲ ಬ್ರೇಕ್ ಮೀಟಿಂಗ್ ಎಂದು ಆರ್.ಅಶೋಕ್ ಹೇಳಿದ್ದಾರೆ.

ರಾಜ್ಯ ರಾಜಕೀಯ ಬೆಳವಣಿಗೆಯ ಮಧ್ಯೆ ಇಂದು ಬೆಳಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ನೆಪದಲ್ಲಿ ಸೇರಿದ್ದಾರೆ. ಈ ವೇಳೆ ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಚರ್ಚೆ ನಡೆದಿದೆ.












