Goods train derail in Odisha: ಒಡಿಶಾದ ಬಾಲಸೋರ್ ನಲ್ಲಿ ರೈಲು ದುರಂತ ಮಾಸುವ ಮುನ್ನವೆ ಮತ್ತೊಂದು ರೈಲು ಅಪಘಾತ ಸಂಭವಿಸಿದೆ. ಒಡಿಶಾದ ಬರ್ಗಢ್ ಜಿಲ್ಲೆಯಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ.


ಸುಣ್ಣದ ಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಬರ್ಗಢ್ ಜಿಲ್ಲೆಯಲ್ಲಿ ವ್ಯಾಗನ್ ಗಳು ಹಳಿ ತಪ್ಪಿವೆ. ದುರಂತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.












