ಅಥಣಿ: 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರಿಗೆ ಅಥಣಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 9ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸುವಂತೆ ಸೂಚಿಸಲಾಗಿದೆ.

ತಳವಾರ ಸಮಾಜಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂದು ಲಕ್ಷ್ಮಣ ಸವದಿ ಅವರನ್ನು ಪ್ರಶ್ನಿಸಿದ್ದಕ್ಕೆ ಸವದಿ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಜು ಜಮಖಂಡಿಕರ್ ಆರೋಪಿಸಿದ್ದರು. ಈ ಘಟನೆ ಸವದಿ ಅವರ ಸಮ್ಮುಖದಲ್ಲೇ ನಡೆದಿದ್ದು, ಅವರ ಪ್ರಚೋದನೆಯಿಂದಲೇ ಗಲಾಟೆ ನಡೆದಿದೆ ಎಂಬುದು ದೂರುದಾರರ ಆರೋಪವಾಗಿತ್ತು.
ಈ ಸಂಬಂಧ ರಾಜು ಜಮಖಂಡಿಕರ್ ಅವರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಲಕ್ಷ್ಮಣ ಸವದಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 9ರಂದು ಖುದ್ದು ಹಾಜರಾಗುವಂತೆ ಆದೇಶಿಸಿದೆ.






