
ಹೊಸ ವರ್ಷದ ಮೊದಲ ದಿನವೇ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಮನಗರ ಜಿಲ್ಲೆಯ ತಾವರೆಕೆರೆ ರಸ್ತೆ ಬಳಿ ಟೀ ಕುಡಿಯಲು ಹೋಗಿದ್ದ ವೇಳೆ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮಂಜು, ಕಿರಣ್ ಎಂದು ಗುರುತಿಸಲಾಗಿದೆ. ಇಂದು ನಸುಕಿನ ಜಾವ 3 ಗಂಟೆಗೆ ಅಪಘಾತ ಸಂಭವಿಸಿದ್ದು, ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.










