ವಿಧಾನ ಪರಿಷತ್ ಖಾಲಿ ಸ್ಥಾನಗಳ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಈಶಾನ್ಯ ಶಿಕ್ಷಕರ, ಆಗ್ನೇಯ ಪದವೀಧರರ, ಪಶ್ಚಿಮ ಪದವೀಧರರ ಕ್ಷೇತ್ರ ಸೇರಿ ಮೂರು ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗಿದೆ. ಪ್ರಮುಖ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ

ಶಶೀಲ್ ಜಿ. ನಮೋಶಿ , ಎಸ್.ವಿ. ಸಂಕನೂರು, ಕೆ.ಎಂ. ಸುರೇಶ್ ಅವರಿಗೆ ಅವಕಾಶ ನೀಡಲಾಗಿದೆ.ಜೂನ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ಈ ಬಾರಿ ಅನುಭವಿ ನಾಯಕರನ್ನೇ ಕಣಕ್ಕಿಳಿಸಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸುಶೀಲ್ ನಮೋಶಿಗೆ ಟಿಕೆಟ್ ನೀಡಲಾಗಿದೆ.ಇನ್ನೂ ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಅವರನ್ನು ಕಣಕ್ಕೆ ಇಳಿಸಿದ್ದರೇ, ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಎಂ ಸುರೇಶ್ ಗೆ ಟಿಕೆಟ್ ಘೋಷಣೆಯನ್ನು ಬಿಜೆಪಿ ಮಾಡಿದೆ.

ಬಿಜೆಪಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳು
- ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶೀಲ್ ಜಿ. ನಮೋಶಿ
- ಪಶ್ಚಿಮ ಪದವೀಧರರ ಕ್ಷೇತ್ರ: ಎಸ್.ವಿ. ಸಂಕನೂರು
- ಆಗ್ನೇಯ ಪದವೀಧರರ ಕ್ಷೇತ್ರ: ಕೆ.ಎಂ. ಸುರೇಶ್






