• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈಶ್ವರ್ ಖಂಡ್ರೆಗೆ ಅರಣ್ಯ ಇಲಾಖೆಯ ಪ್ರಧಾನ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
October 26, 2023
in Top Story, ಕರ್ನಾಟಕ
0
ಈಶ್ವರ್ ಖಂಡ್ರೆಗೆ ಅರಣ್ಯ ಇಲಾಖೆಯ ಪ್ರಧಾನ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಪತ್ರ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ.

ADVERTISEMENT

ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟ ಪ್ರಕರಣಗಳ ಕುರಿತು ತಂಡವನ್ನ ರಚಿಸುವುದರ ಬಗ್ಗೆ ಅರಣ್ಯ, ಜೀವಶಾಸ್ತ್ರ ಪರಿಸರ ಸಚಿವ ಈಶ್ವರ್ ಖಂಡ್ರೆಯವರಿಗೆ ಅರಣ್ಯ ಇಲಾಖೆಯ ಪ್ರಧಾನ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಪತ್ರ ಬರೆದಿದ್ದಾರೆ.

ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಇನ್ನಷ್ಟು ಕಠಿಣ ನಿಯಮಗಳನ್ನು ರೂಪಿಸಲು ಅಗತ್ಯ ಇರುವುದರಿಂದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ತಂಡ ರಚಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತಂಡದಲ್ಲಿ ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಬೆಂಗಳೂರು, ಹಾಸನ, ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಜೊತೆಗೆ ಬೆಂಗಳೂರು ನಗರ, ತುಮಕೂರು, ಕೊಪ್ಪ, ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಇರಲಿದ್ದಾರೆ.

ಈ ತಂಡವು ವನ್ಯಜೀವಿ ವಸ್ತುಗಳ ಸಂಗ್ರಹ ಕಾಯ್ದೆ ಜಾರಿಯಾದಾಗಿನಿಂದ ದಾಖಲಾಗಿರುವ ಪ್ರಕರಣಗಳು, ಕೈಗೊಂಡ ಕ್ರಮಗಳ ಪಟ್ಟಿ ಸಿದ್ಧಪಡಿಸಲಿದೆ. ಹಾಗೂ ಹಾಲಿ ಇರುವ ಪ್ರಕರಣಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಶಿಫಾರಸು, ಹಾಗೂ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನ ಮತ್ತಷ್ಟು ಬಿಗಿಗೊಳಿಸಲು ಅಗತ್ಯ ಕ್ರಮಗಳ ಬಗ್ಗೆ ಒಂದು ವಾರದೊಳಗೆ ವರದಿ ನೀಡಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ-1972 ರ ಅಡಿ ಹುಲಿ ಉಗುರು, ಹಲ್ಲು, ಚರ್ಮ ಸೇರಿದಂತೆ ಯಾವುದೇ ವನ್ಯಜೀವಿಯ ಅಂಗಾಂಗದಿಂದ ಮಾಡಿದ ವಸ್ತುಗಳ ಸಂಗ್ರಹ ಹಾಗೂ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ವಿಶೇಷ ತಂಡದ ಸದಸ್ಯರು ಈ ಕಾಯ್ದೆಯನ್ನ ಹೇಗೆ ಕಠಿಣವಾಗಿ ಜಾರಿ ತರಬೇಕು ಹಾಗೂ ಹಾಲಿ ಪ್ರಕರಣಗಳಲ್ಲಿ ಹೇಗೆ ಕಾನೂನು ಕ್ರಮವನ್ನು ಜರುಗಿಸಬೇಕ, ಮುಂದಿನ ದಿನಗಳಲ್ಲಿ ಈ ಕಾಯ್ದೆಯಡಿ ಹೇಗೆ ಇಲಾಖೆ ಕೆಲಸ ಮಾಡಬೇಕು ಎಂಬ ರೂಪುರೇಷೆ ಸಿದ್ಧಪಡಿಸಲಿದೆ.

Tags: Banglorebrijithkumar dikshithIshwar Khandre
Previous Post

ಟಿವಿ ಶೋ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಬಿಆರ್‌ಎಸ್‌ ಶಾಸಕನಿಂದ ಹಲ್ಲೆ

Next Post

ಅಮೆರಿಕಾ: ಸಾಮೂಹಿಕ ಗುಂಡಿನ ದಾಳಿ- 22 ಮಂದಿ ದುರ್ಮರಣ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಅಮೆರಿಕಾ: ಸಾಮೂಹಿಕ ಗುಂಡಿನ ದಾಳಿ- 22 ಮಂದಿ ದುರ್ಮರಣ

ಅಮೆರಿಕಾ: ಸಾಮೂಹಿಕ ಗುಂಡಿನ ದಾಳಿ- 22 ಮಂದಿ ದುರ್ಮರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada