• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರದ ಬದಲು ಎಎಪಿಯ ಹೊಸ ಎಂಜಿನ್‌ ಸರ್ಕಾರ ತನ್ನಿ: ಅರವಿಂದ್‌ ಕೇಜ್ರಿವಾಲ್

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ಕರ್ನಾಟಕ, ರಾಜಕೀಯ
0
ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರದ ಬದಲು ಎಎಪಿಯ ಹೊಸ ಎಂಜಿನ್‌ ಸರ್ಕಾರ ತನ್ನಿ: ಅರವಿಂದ್‌ ಕೇಜ್ರಿವಾಲ್
Share on WhatsAppShare on FacebookShare on Telegram

ದಾವಣಗೆರೆ: ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರದ ಆಡಳಿತದಲ್ಲಿ ಕಮಿಷನ್‌ ಪ್ರಮಾಣ ಮಾತ್ರ ಡಬಲ್‌ ಆಗಿದ್ದು, ಜನಪರ ಹಾಗೂ ಶೂನ್ಯ ಪರ್ಸೆಂಟ್‌ ಆಡಳಿತಕ್ಕಾಗಿ ಆಮ್‌ ಆದ್ಮಿ ಪಾರ್ಟಿಯ ಹೊಸ ಎಂಜಿನ್‌ ಸರ್ಕಾರವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಬೇಕು ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹೇಳಿದರು.

ADVERTISEMENT

ದಾವಣಗೆರೆಯಲ್ಲಿ ನಡೆದ ಆಮ್‌ ಆದ್ಮಿ ಪಾರ್ಟಿಯ ಬೃಹತ್‌ ಸಮಾವೇಶದಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ ಅರವಿಂದ್‌ ಕೇಜ್ರಿವಾಲ್‌, “ನಮಸ್ಕಾರ ಕರ್ನಾಟಕ. ಕರ್ನಾಟಕದ ಹೃದಯ ಭಾಗ ದಾವಣಗೆರೆ. ಇಲ್ಲಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ” ಎಂದು ಕನ್ನಡದಲ್ಲೇ ಹೇಳಿದರು.

ಕರ್ನಾಟಕದ ಜನರು ಬಹಳ ಒಳ್ಳೆಯವರು ಹಾಗೂ ದೇಶಭಕ್ತಿ ಉಳ್ಳವರು. ಆದರೆ ಇಲ್ಲಿನ ಜನಪ್ರತಿನಿಧಿಗಳು ಕೆಟ್ಟವರಾಗಿದ್ದಾರೆ. ಕರ್ನಾಟಕದ ಸರ್ಕಾರವು 40% ಸರ್ಕಾರವೆಂಬ ಮಾತು ಪ್ರಚಲಿತದಲ್ಲಿದೆ. ಕಳೆದ ಎರಡು ವರ್ಷಗಳಲ್ಲಿ 40% ಕಮಿಷನ್‌ ನೀಡದೇ ಸರ್ಕಾರದ ಯಾವುದೇ ಗುತ್ತಿಗೆ ಕಾಮಗಾರಿ ನಡೆಯುತ್ತಿಲ್ಲವೆಂದು ಗುತ್ತಿಗೆದಾರರ ಸಂಘವೇ ಹೇಳುತ್ತಿದೆ. ಆದರೆ ಬಿಜೆಪಿಯ ಅಮಿತ್‌ ಶಾರವರು ಇಲ್ಲಿಗೆ ಬಂದು ಭ್ರಷ್ಟರಹಿತ ಆಡಳಿತ ನೀಡುವುದಾಗಿ ಹೇಳುತ್ತಿದ್ದಾರೆ. ಇದೇ ಜಿಲ್ಲೆಯ ಹಾಗೂ ಅಮಿತ್‌ ಶಾರವರ ಪಕ್ಷದ ಶಾಸಕ ಹಾಗೂ ಅವರ ಮಗನ ಬಳಿ ಲೋಕಾಯುಕ್ತ ಅಧಿಕಾರಿಗಳಿಗೆ 8 ಕೋಟಿ ರೂಪಾಯಿ ನಗದು ದೊರೆತಿದೆ. ಶಾಸಕರನ್ನು ಈವರೆಗೂ ಬಂಧಿಸದ ಸರ್ಕಾರಕ್ಕೆ ಪದ್ಮಭೂಷಣ ನೀಡಬೇಕು” ಎಂದು ವ್ಯಂಗ್ಯವಾಡಿದರು.

“ದೆಹಲಿ ಸರ್ಕಾರದ ಸಚಿವ ಮನೀಶ್ ಸಿಸೋಡಿಯಾ ಅವರ ಮನೆ, ಕಚೇರಿ, ಬ್ಯಾಂಕ್ ಲಾಕರ್ ಮೇಲೆ ಕೇಂದ್ರ ಸರ್ಕಾರದ ಸಂಸ್ಥೆಗಳು ದಾಳಿ ಮಾಡಲಾಯಿತು. ಅಲ್ಲಿ ಕೇವಲ ಹತ್ತು ಸಾವಿರ ರೂಪಾಯಿ ಹಣ ಸಿಕ್ಕಿತು. ಆದರೆ ಅವರ ಮೇಲೆ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆ ಎಂಬ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಭ್ರಷ್ಟಾಚಾರ, ಅತ್ಯಾಚಾರ, ಲಂಚ ಕೇಳುವ, ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುವವರು, ಮೋಸ, ವಂಚನೆ ಮಾಡುವವರು ಬಿಜೆಪಿಯಲ್ಲಿದ್ದಾರೆ. ಕರ್ನಾಟಕದಲ್ಲಿ ಮೊದಲು ಶೇಕಡಾ 20ರಷ್ಟು ಕಮಿಷನ್‌ ಪಡೆಯುವ ಸರ್ಕಾರವಿತ್ತು. ಪ್ರಧಾನಿ ಮೋದಿಯವರು 2018ರಲ್ಲಿ ಕರ್ನಾಟಕಕ್ಕೆ ಆಗಮಿಸಿ, ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಭ್ರಷ್ಟಾಚಾರಕ್ಕೆ ಅಂತ್ಯಹಾಡುವುದಾಗಿ ಹೇಳಿದರು. ಆದರೆ ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಮಿಷನ್‌ ಡಬಲ್‌ ಆಯಿತು. ಈಗ 40% ಕಮಿಷನ್‌ ಪಡೆಯಲಾಗುತ್ತಿದ್ದು, ಬಿಜೆಪಿ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದರೆ ಕಮಿಷನ್‌ ಮತ್ತೆ ಡಬಲ್‌ ಆಗಿ 80% ತಲುಪಲಿದೆ. ಆದ್ದರಿಂದ ಜನರು ಡಬಲ್‌ ಎಂಜಿನ್‌ ಸರ್ಕಾರದ ಬದಲು ಆಮ್‌ ಆದ್ಮಿ ಪಾರ್ಟಿಯ ಹೊಸ ಎಂಜಿನ್‌ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು” ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದರು.

 “ರಾಜ್ಯ ಸರ್ಕಾರದ ಕಮಿಷನ್‌ ದಂಧೆಯಿಂದಾಗಿ ಶಾಲೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟ ಕೂಡ ಆರೋಪಿಸುತ್ತಿವೆ. ಸರ್ಕಾರದಿಂದ ಅನುದಾನ ಪಡೆಯಲು 30% ಕಮಿಷನ್‌ ನೀಡಬೇಕಾಗಿದೆ ಎಂದು ಹಿಂದೂ ಮಠಗಳು ಆರೋಪಿಸಿವೆ. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನ ರಸ್ತೆಗಳನ್ನು ದುರಸ್ತಿ ಹಾಗೂ ನಿರ್ವಹಣೆಗೆ 20,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇತ್ತೀಚೆಗೆ 6000 ಕೋಟಿ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದಾಗಿ 100ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಾರೆಂದು 34 ಕೋಟಿ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಿಸಲಾಯಿತು. ಆದರೆ ಕೇವಲ 24 ಗಂಟೆಗಳೊಳಗೆ ರಸ್ತೆಯು ಕುಸಿದು ಗುಂಡಿ ಬಿದ್ದಿತು. ಕರ್ನಾಟಕದ ಯುವಕರು ಉದ್ಯೋಗವನ್ನು ಹಣಕೊಟ್ಟು ಖರೀದಿಸಬೇಕಾಗಿದೆ. 50 ಲಕ್ಷದಿಂದ 1 ಕೋಟಿ ರೂಪಾಯಿ ತನಕ ಹಣ ನೀಡಿದವರಿಗೆ ಪಿಎಸ್‌’ಐ ಹುದ್ದೆಗಳನ್ನು ಮಾರಾಟ ಮಾಡಲಾಗಿದೆ. ಉಪನ್ಯಾಸಕರಾಗಲು 25 ಲಕ್ಷ ರೂಪಾಯಿ ನೀಡಬೇಕಾಗಿದೆ. ಶಾಸಕರು ಕೂಡ ಮಾರಾಟದ ಸರಕಾಗಿದ್ದು, ಆಪರೇಷನ್‌ ಕಮಲ ಹೆಸರಿನಲ್ಲಿ ಅವರನ್ನು ಖರೀದಿಸಿಯೇ ಬಿಜೆಪಿ ಸರ್ಕಾರವನ್ನು ರಚಿಸಲಾಗಿದೆ” ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದರು.

“ಕರ್ನಾಟಕದಲ್ಲಿ ವಿದ್ಯುತ್‌, ನೀರು, ಆರೋಗ್ಯ, ಗುಣಮಟ್ಟದ ಶಿಕ್ಷಣ, ಮಹಿಳೆಯರಿಗೆ ಸಾರಿಗೆ ಉಚಿತವಾಗಿ ಇಲ್ಲದಿದ್ದರೂ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಗಳು ಕಳೆದ ಐದು ವರ್ಷಗಳಲ್ಲಿ 3 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದವೆ. ಜನರಿಗೆ ಉಚಿತ ಕೊಡುಗೆ ನೀಡುವ ಬದಲು ಅವರ ತಲೆ ಮೇಲೆ ಸಾಲದ ಹೊರೆ ಹೊರಿಸಿವೆ. ದೆಹಲಿಯಲ್ಲಿ ಇವೆಲ್ಲ ಉಚಿತವಾಗಿದ್ದರೂ ಅಲ್ಲಿನ ಆರ್ಥಿಕ ಸ್ಥಿತಿ ಚೆನ್ನಾಗಿದೆ. ಆಮ್‌ ಆದ್ಮಿ ಪಾರ್ಟಿಯು ಜೀರೋ ಕಮಿಷನ್‌ ಆಡಳಿತ ನೀಡುತ್ತಿರುವುದರಿಂದ ಇವೆಲ್ಲ ಸಾಧ್ಯವಾಗಿದೆ” ಎಂದು ಹೇಳಿದರು.

ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರರಹಿತ ಆಡಳಿತ

“ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರರಹಿತ ಆಡಳಿತ ನೀಡಲಾಗುತ್ತದೆ. ಪಂಜಾಬ್‌ನಲ್ಲಿ ನಮ್ಮದೇ ಪಕ್ಷದ ಇಬ್ಬರು ನಾಯಕರು ತಪ್ಪು ಮಾಡಿರುವುದು ಕಂಡುಬಂದಾಗಿ ಶೀಘ್ರವೇ ಅವರನ್ನು ಅಧಿಕಾರದಿಂದ ವಜಾ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭ್ರಷ್ಟಾಚಾರದ ವಿಷಯದಲ್ಲಿ ನಾವು ಜೀರೋ ಟಾಲರೆನ್ಸ್‌ ಹೊಂದಿದ್ದೇವೆ. ಯಾರೇ ಭ್ರಷ್ಟಾಚಾರ ಮಾಡಿದರೂ ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

Tags: AAPಅರವಿಂದ್‌ ಕೇಜ್ರಿವಾಲ್ದಾವಣಗೆರೆಬಿಜೆಪಿಮನೀಶ್ ಸಿಸೋಡಿಯಾ
Previous Post

ಔರಾದನಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ

Next Post

ಬಿಜೆಪಿ ಶಾಸಕನ ಪುತ್ರನ ಬಳಿ ಕಂತೆಕಂತೆ ಹಣ ಎಲ್ಲಿಂದ ಬಂತು?: ಭಗವಂತ್‌ ಮಾನ್ ಪ್ರಶ್ನೆ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಬಿಜೆಪಿ ಶಾಸಕನ ಪುತ್ರನ ಬಳಿ ಕಂತೆಕಂತೆ ಹಣ ಎಲ್ಲಿಂದ ಬಂತು?: ಭಗವಂತ್‌ ಮಾನ್ ಪ್ರಶ್ನೆ

ಬಿಜೆಪಿ ಶಾಸಕನ ಪುತ್ರನ ಬಳಿ ಕಂತೆಕಂತೆ ಹಣ ಎಲ್ಲಿಂದ ಬಂತು?: ಭಗವಂತ್‌ ಮಾನ್ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada