ಮಂಡ್ಯ: ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರು ದಾಂಧಲೆ ಮಾಡಿರುವ ಘಟನೆ ನಡೆದಿದೆ.
ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ (Belluru town) ಈ ಘಟನೆ ನಡೆದಿದೆ. ಬೈಕ್ ಟಚ್ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಬೈಕ್ ಟಚ್ ಮಾಡಿಕೊಂಡು ಓವರ್ಟೇಕ್ ಮಾಡಿದ್ದ ಇಬ್ಬರು ಮುಸ್ಲಿಂ ಯುವಕರನ್ನು ಅಭಿಷೇಕ್ ಎಂಬ ವ್ಯಕ್ತಿ ಪ್ರಶ್ನಿಸಿದ್ದ. ಇದರಿಂದ ಕೋಪಗೊಂಡ ಅನ್ಯಕೋಮಿನ ಯುವಕರು, ಹತ್ತಾರು ಜನರನ್ನು ಕರೆದುಕೊಂಡು ಬಂದು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಹಿಂದೂಗಳ ಮನೆಗೆ ಮಾರಾಕಾಸ್ತ್ರ ಹಿಡಿದು ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯರು ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.