ಕರೋನಾ ನಿಯಂತ್ರಣ ಹಿನ್ನೆಲೆ, ರಾಜ್ಯದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೂನ್ 21 ರಿಂದ ಬಿಎಂಟಿಸಿ ಸಂಚಾರಕ್ಕೆ ಬಿಬಿಎಂಪಿ ಕೆಲವು ಶರತ್ತುಗಳೊಂದಿಗೆ ಒಪ್ಪಿಗೆ ಸೂಚಿಸಿದೆ.

ಬಿಬಿಎಂಪಿ ಕಚೇರಿಯಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು, ನಗರ ಪೊಲೀಸ್ ಕಮಿಷನರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಚರ್ಚಿಸಿ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಸಾರಿಗೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಿಬಿಎಂಟಿಸಿ ಸಂಚಾರಕ್ಕೆ ಅನುಮತಿ ನೀಡಿದರೆ ಸೋಂಕು ಮತ್ತಷ್ಟು ಹೆಚ್ಚಳವಾಗಲಿದೆ. ಸದ್ಯಕ್ಕೆ ಬಸ್ ಸಂಚಾರಕ್ಕೆ ಅನುಮತಿ ಬೇಡ ಎಂದು ಪಾಲಿಕೆ ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು. ಆದರೀಗಾ ಒತ್ತಡಕ್ಕೆ ಮಣಿದ ಬಿಎಂಟಿಸಿ ಸೋಮುವಾರದಿಂದ ನಗರದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಿದೆ.
ಷರತ್ತುಗಳು
1.ಶೇಕಡಾ 50ರಷ್ಟು ಬಸ್ಸುಗಳನ್ನು ಮಾತ್ರ ರಸ್ತೆಗಿಳಿಸಲು ಅನುಮತಿ ಸಲಾಗಿದೆ.
2. ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ
3. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
4. ನಿಂತುಕೊಂಡು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ
5. ಮೆಜೆಸ್ಟಿಕ್, ಟರ್ಮಿನಲ್ಸ್, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
6. 7 ಗಂಟೆಯೊಳಗೆ ಬಸ್ ಸಂಚಾರ ನಿಲ್ಲಿಸಬೇಕು ಎಂದು ಷರತ್ತು ವಿಧಿಸಿದೆ