ನಾಸಿಕ್-ಗುಜರಾತ್ ಹೆದ್ದಾರಿಯ (Nasik Gujarat Highway) ಸಪುತಾರಾ ಘಾಟ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಈ ಅಪಘಾತದಲ್ಲಿ 15 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಿಗ್ಗೆ 5:30 ಕ್ಕೆ ಅಪಘಾತ ಸಂಭವಿಸಿದ್ದು, ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಈ ಬಸ್ ನಲ್ಲಿದ್ದ ಜನ ದೇವಸ್ಥಾನಕ್ಕೆ ಭೇಟಿ ನೀಡಿ ನಾಸಿಕ್ನಿಂದ ಗುಜರಾತ್ಗೆ ವಾಪಸ್ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರೆಲ್ಲರೂ ಮಧ್ಯಪ್ರದೇಶದ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.