ಜೂನ್ 20, 21ರಂದು ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ರಾಜ್ಯ ಸರ್ಕಾರ ಅವರ ಆಗಮನಕ್ಕಾಗಿ ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾಣ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಬೊಮ್ಮಾಯಿ ಬೆಂಗಳೂರಿನಲ್ಲಿ ಅಂಡರ್ ಗ್ರೌಂಡ್ ರೈಲ್ವೆ ಯೋಜನೆ ಕಾಮಗಾರಿ ಶಿಲಾನ್ಯಾಸ, ಇಂಡಿಯನ್ ಇನ್ಸಟಿಟ್ಯೂಟ್ ಆಫ್ ಸೈನ್ಸ್ ಸ್ಕೂಲ್ ಉದ್ಘಾಟನೆ ಹಾಗು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಜೂನ್ 21 ರಂದು ಮೈಸೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳಲಿದ್ದಾರೆ ಎಂದು ತಿಳಿಸಿದ್ದರು. ಈ ವೇಳೆ ಮೋದಿ ಕಾರ್ಯಕ್ರಮದಲ್ಲಿ ಅಪಾರ ಜನಸ್ತೋಮ ಸೇರುವುದರಿಂದ ಕೋವಿಡ್ ಹರಡವುದಿಲ್ಲವಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಹಾಗೆಯೇ ಹೊರಟುಬಿಟ್ಟರು.
