ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿಸಿ ಯಡಿಯೂರಪ್ಪ ಮಾತು ತಪ್ಪಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ  ಮುಖ್ಯಮಂತ್ರಿಗಳು ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲ್ಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ‌ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ ಎಂದು ಅವರು ಹೇಳಿದ್ದಾರೆ.

 ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅದೇಶ ಹೊರಡಿಸಿರುವುದು ದೂರು ದುಮ್ಮಾನ ಪರಿಹರಿಸುವವರು ಯಾರು ಎಂಬ ಪ್ರಶ್ನೆ‌ ಎದುರಾಗಿದೆ. ಸರ್ಕಾರದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಸಲಹೆ ನೀಡುವ ಉದ್ದೇಶವನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ಮಾಡುತ್ತಿಲ್ಲ. ಜಿಲ್ಲೆಗೆ ಕೇವಲ ಒಂದೇ ಒಂದು ಕೇಂದ್ರ ಇರುವ ಕಾರಣ ಎಲ್ಲರಿಗೂ ಸುಲಭವಾಗಿ ನೆರವು ಸಿಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರೆಸಿ. ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Related posts

Latest posts

ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

ಕೋವಿಡ್‌ ಸೋಂಕುಗಳಲ್ಲಿ ಕಳೆದೊಂದು ತಿಂಗಳಿನಿಂದ ತತ್ತರಿಸಿರುವ ಭಾರತ ಕ್ರಮೇಣ ಸೋಂಕಿನ ತೀವ್ರತೆ ಇಳಿಯುತ್ತಿರುವುದಾಗಿ ವರದಿ ಮಾಡುತ್ತಿದೆ. ಅದಾಗ್ಯೂ, ಕೋವಿಡ್‌ ಸಂಬಂಧಿತ ದೈನಂದಿನ ಸಾವಿನ ಪ್ರಮಾಣ ಈಗಲೂ 4 ಸಾವಿರಕ್ಕೂ ಹೆಚ್ಚಿದೆ. ಭಾರತದ ಗ್ರಾಮೀಣ...

ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋವಿಡ್ ನಿಂದಾಗಿ ಸಾವು...

ನಾರದಾ ಲಂಚ ಪ್ರಕರಣ- ಟಿಎಂಸಿ ಶಾಸಕ, ಸಚಿವರ ಬಂಧನ ವಿರೋಧಿಸಿ ಸಿಬಿಐ ಕಚೇರಿ ಮುಂದೆ ಟಿಎಂಸಿ ಬೆಂಬಲಿಗರಿಂದ ಪ್ರತಿಭಟನೆ

ನಾರದಾ ಲಂಚಪ್ರಕರಣದ ಆರೋಪದಡಿ ತೃಣಮೂಲ ಕಾಂಗ್ರೆಸ್ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ವು...