ಬಿಜೆಪಿಯ ಕೇಂದ್ರ ಚುನಾವಣಾ ಮಂಡಳಿ (Bjp central election board) ಹಾಗೂ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ (BS Yediyurappa) ಹುಟ್ಟುಹಬ್ಬದ ಸಂಭ್ರಮ.

ಇಂದು 82 ನೇ ವಸಂತಕ್ಕೆ ಬಿ.ಎಸ್.ಯಡಿಯೂರಪ್ಪ ಕಾಲಿಟ್ಟಿದ್ದಾರೆ. ಹೀಗಾಗಿ ಸರಳವಾಗಿ ಬೆಂಗಳೂರಿನ ಅವರ ನಿವಾಸದಲ್ಲಿ ಹುಟ್ಟಿಹಬ್ಬ ಆಚರಣೆ ಮಾಡಲಾಗುತ್ತಿದ್ದೆ. ಮಾಜಿ ಸಿಎಂ ಯಡಿಯೂರಪ್ಪ ಉತ್ತಾನ ಸ್ಥಾನದಲ್ಲಿದ್ದಾರೆ.
ಬೆಂಗಳೂರಿನ ಡಾಲರ್ಸ್ಕಾಲೋನಿಯ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪರ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಸರಳವಾಗಿ ಕುಟುಂಬಸ್ಥರು, ಪಕ್ಷದ ನಾಯಕರುಗಳ ಜೊತೆಗೆ ಹುಟ್ಟುಹಬ್ಬವನ್ನು BSY ಆಚರಿಸಿಕೊಳ್ಳುತ್ತಿದ್ದಾರೆ.

ಇಂದು ಬೆಳಿಗ್ಗೆ 7 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ಬೆಂಗಳೂರಿನ ನಿವಾಸದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ವೇಳೆ
ಬರುವ ನಾಯಕರುಗಳನ್ನು ಭೇಟಿ ಮಾಡಲಿರುವ ಯಡಿಯೂರಪ್ಪ, ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಬೂಕನಕೆರೆಯ ಮನೆದೇವರಿಗೆ ಪೂಜೆ ಸಲ್ಲಿಸಲಿದ್ದಾರೆ.