ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಗುರುವಾರ ತಮ್ಮ ತಂದೆ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಯಾವುದೇ ಷರತ್ತು ವಿಧಿಸಿಲ್ಲ ಎಂದು ಹೇಳಿದ್ದಾರೆ.
“ತನ್ನ ಮಗ ವಿಜಯೇಂದ್ರರಿಗೆ ಮಂತ್ರಿ ಸ್ಥಾನ ನೀಡಬೇಕು ಎಂಬ ಷರತ್ತಿನ ಮೇಲೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಎಲ್ಲಾ ಕಡೆ ಚರ್ಚೆಯಾಗಿತ್ತು ಈ ಕುರಿತು ಪ್ರತಿಕ್ರಿಯಿಸಿದ ಅವರು, ಇದೆಲ್ಲವೂ ಅವರ ನಾಯಕತ್ವಕ್ಕೆ ಕಪ್ಪುಚುಕ್ಕೆ ತರುವಂತಹದ್ದು. ಯಡಿಯೂರಪ್ಪ 40-45 ವರ್ಷಗಳಿಂದ ಹೋರಾಟ ಮಾಡಿದ್ದಾರೆ, ಪಕ್ಷವನ್ನು ಸಂಘಟಿಸಿ ಈ ಮಟ್ಟಕ್ಕೆ ತಂದಿದ್ದಾರೆ. ಇದು ಕಾರ್ಯಕರ್ತರ ಪಕ್ಷ “ರಾಜೀನಾಮೆ ನೀಡುವ ಮೊದಲು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಯಾವುದೇ ಷರತ್ತು ವಿಧಿಸಿಲ್ಲ, ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದಿದ್ದರಿಂದ ನನಗೆ ನೋವಾಗಿಲ್ಲ ಎಂದು ವಿಜಯೇಂದ್ರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರ.
“ಪಕ್ಷವು ಸಂಘಟಿಸಲು ನನಗೆ ಅವಕಾಶವನ್ನು ನೀಡಿದೆ, ನಾನು ಅದನ್ನು ಮುಂದುವರಿಸುತ್ತೇನೆ” ಎಂದು ಹೇಳಿದ್ದಾರೆ.
ಯಡಿಯೂರಪ್ಪ, ಕಿರಿಯ ಪುತ್ರ ವಿಜಯೇಂದ್ರ ಅವರನ್ನು ತಮ್ಮ ಹೊಸ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ನಾಯಕರ ಮೇಲೆ ಒತ್ತಡ ಹೇರಿದ್ದಾರೆ ಎಂದು ವರದಿಯಾಗಿದ್ದವು.
ವಿಜಯೇಂದ್ರ ಅವರನ್ನು ಸಚಿವರನ್ನಾಗಿ ಮಾಡುವ ಪ್ರಶ್ನೆಗೆ ಸಚಿವ ಸಂಪುಟ ವಿಸ್ತರಿಸುವ ಮುನ್ನ ಪ್ರತಿಕ್ರಿಯಿಸಿದ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದಾರೆ. ಅಲ್ಲದೆ, ಕರ್ನಾಟಕದ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಕೂಡ ವಿಜಯೇಂದ್ರ ಅವರೊಂದಿಗೆ ವೈಯಕ್ತಿಕವಾಗಿ ಈ ಕುರಿತು ಮಾತನಾಡಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದರು.
“ನಾನು ಯಡಿಯೂರಪ್ಪನವರ ಮಗನಾಗಿರುವುದರಿಂದ ನಾನು ಮಂತ್ರಿಯಾಗಬೇಕೆಂಬ ಹಂಬಲವಿದ್ದರೆ ಅದು ಸಂಪೂರ್ಣವಾಗಿ ತಪ್ಪು. ನಾನು ಸಂತೋಷದಿಂದ ಪಕ್ಷದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ಪಕ್ಷದ ತೀರ್ಮಾನಕ್ಕೆ ಬಿಟ್ಟದ್ದು. ಪಕ್ಷದ ಉಪಾಧ್ಯಕ್ಷನಾಗಿದ್ದು ರಾಜ್ಯದಲ್ಲಿ ಸಂಘಟನೆ ಕೆಲಸ-ಕಾರ್ಯಗಳನ್ನು ಮಾಡಬೇಕಿದೆ. ಇಡೀ ರಾಜ್ಯದಲ್ಲಿ ವಿಜಯೇಂದ್ರ ಎಂದರೆ ಅದು ವರುಣಾ ಕ್ಷೇತ್ರ ಎಂದು ಗುರುತಿಸುತ್ತಾರೆ. ಬಿಜೆಪಿಯನ್ನು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕೆಂಬ ಸಂಕಲ್ಪ ನಮ್ಮದು’ ಎಂದು ವಿಜಯೇಂದ್ರ ತಿಳಿಸಿದರು.
ಜೂನ್ ನಲ್ಲಿ ಹಿರಿಯ ಬಿಜೆಪಿ ನಾಯಕ ಸಿ ಎಂ ಉದಾಸಿಯವರ ನಿಧನದ ನಂತರ ಹಾನಗಲ್ ವಿಧಾನಸಭಾ ಕ್ಷೇತ್ರವು ಖಾಲಿಯಾಗಿದೆ, ಮತ್ತು ವಿಜಯೇಂದ್ರ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಬಹುದೆಂಬ ಊಹೆಗಳಿವೆ. ಸದ್ಯಕ್ಕೆ ಉಪಚುನಾವಣೆ ಇನ್ನೂ ಘೋಷಣೆಯಾಗಿಲ್ಲ.
2018ರ ವಿಧಾನಸಭೆ ಚುನಾವಣೆಗೆ ಮುನ್ನ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಯಡಿಯೂರಪ್ಪ, ತಮ್ಮ ಮಗ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು ಸಹ ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ತಯಾರಿಯನ್ನು ವಿಜಯೇಂದ್ರ ಮಾಡಿಕೊಂಡಿದ್ದರು ಆದರೆ ಕಡೆ ಸಮಯದಲ್ಲಿ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಸ್ಪರ್ಧಿಸದಂತೆ ತಾಕೀತು ನೀಡಿ ಟಿ. ಬಸವರಾಜುಗೆ ಟಿಕೇಟ್ ನೀಡಿತು.


