2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇವೆ. ಪಕ್ಷದ ನಾಯಕರು, ಮುಖಂಡರು ಈಗಾಗಲೇ ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಪ್ರಚಾರದ ವೇಳೆಯೇ ರಾಜಕೀಯ ನಾಯಕರ ನಡುವೆ ವಾರ್ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ(narendra modi) ನೂರು ಸಾರಿ ಬಂದ್ರೂ ರಾಜ್ಯದಲ್ಲಿ ಬಿಜೆಪಿ ಗೆಲ್ಲಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ, ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ರಾಯಚೂರು(raichur) ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ʻಕಾಂಗ್ರೆಸ್ನವರು ಯಾಕೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ ಬಿಜೆಪಿಯಲ್ಲಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾರಂತಹ ನಾಯಕರಿದ್ದಾರೆ. ಇವರನ್ನು ಎದುರಿಸಲು ಕಾಂಗ್ರೆಸ್(congress) ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ನವರು ಮನಬಂದಂತೆ ಮಾತನಾಡುತ್ತಾರೆʼ ಅಂತ ಸಿದ್ದರಾಮಯ್ಯಗೆ(siddaramaiah) ಮಾಜಿ ಸಿಎಂ ಯಡಿಯೂರಪ್ಪ(BS yediyurappa) ಟಾಂಗ್ ಕೊಟ್ಟರು.

ʻಯಡಿಯೂರಪ್ಪ(BS yediyurappa) ಸಿಎಂ ಸ್ಥಾನದಿಂದ ಕೆಳಗಳಿದ ನಂತರ ಯಡಿಯೂರಪ್ಪನವರನ್ನು ಬಿಜೆಪಿ(BJP) ಹೈಕಮಾಂಡ್ ಒತ್ತಾಯಪೂರ್ವಕವಾಗಿ ಕೆಳಗಿಳಿಸಿದೆ ಎಂಬ ಟೀಕೆಯನ್ನು ಮಾಡುತ್ತಿದೆ. ಬಿಜೆಪಿಯವರು ಯಡಿಯೂರಪ್ಪ ಅವರು ಕಣ್ಣೀರು ಹಾಕುವಂತೆ ಮಾಡಿದರು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾನು ಕಣ್ಣೀರು ಹಾಕುವ ಪ್ರಶ್ನೆಯೇ ಇಲ್ಲ. ನನ್ನನ್ನು ಯಾರೂ ಒತ್ತಾಯಪೂರ್ವಕವಾಗಿ ಕೆಳಗಿಳಿಸಿಲ್ಲ. ಸ್ವಂತ ನಿರ್ಧಾರ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆಯಲ್ಲೂ(election) ಪ್ರಚಾರ ಮಾಡಿ ಬಿಜೆಪಿ(BJP) ಅಧಿಕಾರಕ್ಕೆ ತರುತ್ತೇನೆ. ನಿಮ್ಮ ಆಶಿರ್ವಾದ ನಮ್ಮ ಮೇಲಿರಬೇಕು ಅಂತ ಹೇಳಿದ್ರು.













