ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ನೇಣುಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಯ ಆಸುಪಾಸಿನಲಿ ಮನೆಯ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸದ್ಯಕ್ಕೆ ತಿಳಿದು ಬಂದಿದೆ.
ಯಡಿಯೂರಪ್ಪ ಅವರ ಮಗಳಾದ ಪದ್ಮಾವತಿ ಪುತ್ರಿ ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣಗಳು ಸದ್ಯಕ್ಕೆ ತಿಳಿದುಬಂದಿಲ್ಲ.