ಇತರೆ ಹಿಂದಿಳಿದ ವರ್ಗಗಳ ಜನಗಣತಿ ನಡೆಸಲು ಕೇಂದ್ರ ಸರ್ಕಾರ ರಚನಾತ್ಮಕ ಕ್ರಮಗಳನ್ನು ಕೈಗೊಂಡರೆ ಸಂಸತ್ತಿನ ಒಳಗಡೆ ಮತ್ತು ಹೊರಗಡೆ ಬೆಂಬಲಿಸುವುದಾಗಿ ಬಿಎಸ್ಪಿ ವರಿಷ್ಠೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸಿರುವ ಎಸ್ಸಿ ಮತ್ತು ಎಸ್ಟಿ ಜನಗಣತಿಯಿಂದ ಆಗುವ ಸಮಸ್ಯೆಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.
ಬಿಎಸ್ಪಿ ದೇಶದಲ್ಲಿ ಒಬಿಸಿ ಜನಗಣತಿಯನ್ನು ನಡೆಸಲು ಕೇಂದ್ರ ಸರ್ಕಾರವನ್ನುಒತ್ತಾಯಿಸುತ್ತಿದೆ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಯಾವುದೇ ಸಕಾರಾತ್ಮಕ ಹೆಜ್ಜೆ ಇಟ್ಟರು ಸಂಸತ್ತಿನ ಒಳಗಡೆ ಮತ್ತು ಹೊರಗಡೆ ಬಿಜೆಪಿಗೆ ಬೆಂಬಲಿಸುವುದಾಗಿ ಬಿಎಸ್ಪಿ ವರಿಷ್ಠೆ ಮಾಯಾವತಿ ಶುಕ್ರವಾರ ಟ್ವಿಟರ್ನಲ್ಲಿ ತಿಳಿಸಿದ್ದಾರೆ.