2023ರ ಚುನಾವಣೆಗೆ ಶಿಕಾರಿಪುರದಿಂದ ಪುತ್ರ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಹೇಳಿದ್ದು ಸ್ಥಳೀಯ ನಾಯಕರು ಹಾಗೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಹೇಳಿರುವುದು ಅಷ್ಟೇ ಹೊರತು ಈ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಳೇ ಮೈಸೂರು ಭಾಗ ಸೇರಿದಂತೆ ಕರ್ನಾಟಕದ ಯಾವ ಭಾಗದಲ್ಲು ಸ್ಪರ್ಧಿಸಿದ್ದರು ಸಹ ವಿಜಯೇಂದ್ರಗೆ ಗೆದ್ದು ಬರುವ ಶಕ್ತಿ ಇದೆ ಶಿಕಾರಿಪುರದ ಜನತೆಯ ಬೇಡಿಕೆಯಂತೆ ನಾನು ಹೇಳಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಷ್ಟ್ರಧ್ಯಕ್ಷರ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಶುಕ್ರವಾರ ನಾನು ನೀಡಿದ ಹೇಳಿಕೆಯಿಂದ ಸಾಕಷ್ಟು ಗೊಂದಲ ಉಂಟಾಗಿದೆ. ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅಲ್ಲಿನ ಜನರು ಒತ್ತಾಯ ಮಾಡಿದ ಕಾರಣ ನಾನು ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಿಕೆ ನೀಡಿದೆ.

ನನ್ನನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ ಎಂಬುದು ಸತ್ತಕ್ಕೆ ದೂರವಾದ ಮಾತು ಪುರಸಭೆ ಸದಸ್ಯನಾಗಿದ ನನ್ನನ್ನು ನಾಲ್ಕು ಭಾರೀ ಪಕ್ಷ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಸಾಮಾನ್ಯ ಕಾರ್ಯಕರ್ತನನ್ನು ಇಷ್ಟು ಎತ್ತರಕ್ಕೆ ಬೆಳೆಸಿರುವುದು ಬಿಜೆಪಿ ನಾನು ಸಂತೃಪ್ತಿ ಹಾಗೂ ಸಮಾಧಾನದಿಂದ್ದೇನೆ ಎಂದಿದ್ದಾರೆ.
ರಾಜ್ಯದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇನೆ 2023ರ ಚುನಾವಣೆಗೆ ಪಕ್ಷ 140ಕ್ಕು ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಪಕ್ಷವನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಿಕ್ಕೆ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಇಂತಹ ಹೇಳಿಕೆಗಳು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ತಾನು ಕಳ್ಳ ಪರರನ್ನು ನಂಬ ಎಂಬ ರೀತಿ ಹೇಳಿಕೆ ನೀಡುತ್ತಿದ್ದಾರೆ ಈ ಕೂಡಲೇ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.