ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಸಿರುವ ಪಿಂಪ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್‌ವೈ ಸ್ಯಾಂಟ್ರೋ ರವಿ ವಿಷಯದಲ್ಲಿ ಸಿಎಂ ಕ್ರಮ ಕೈಗೊಳ್ಳಲು ಹೇಳಿದ್ದಾರೆಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವರ ಹೆಸರು ಕೇಳಿ ಬಂದ ವಿಚಾರ ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ ಆದರೆ ಸ್ಯಾಂಟ್ರೋ ರವಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ ಸಂಪುಟದ ವಿಸ್ತರಣೆ ವಿಷಯ ಚರ್ಚೆಯಾಗುತ್ತಿದೆ ಎಷ್ಟು ಸ್ಥಾನಗಳನ್ನ ಭರ್ತಿ ಮಾಡುವ ಬಗ್ಗೆ ತಿಳಿದಿಲ್ಲ ಈ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೆ.ಎಸ್.ಈಶ್ವರಪ್ಪಗೆ ಸಚಿವ ಸ್ಥಾನದ ಕುರಿತಾಗಿ ಪ್ರತಿಕ್ರಿಯಿಸಿ ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡುವ ವಿಚಾರ ವರಿಷ್ಠರಿಗೆ ಬಿಟ್ಟಿದ್ದು ಆದರೆ ಈಶ್ವರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಪೇಕ್ಷೆ ಎಂದು ಕೆ.ಎಸ್.ಈ ಪರ ಬ್ಯಾಟ್ ಬೀಸಿದ್ದಾರೆ.
ಕಾಂಗ್ರೆಸ್ ಪಕ್ಷದ ಐಕ್ಯತಾ ಸಮಾವೇಶ ಕುರಿತು ಕೇಳಿದ ಪ್ರಶ್ನೆಗೆ ಮೀಸಲಾತಿ ಕುರಿತು ಬಿಜೆಪಿ ಐತಿಹಾಸಿಕ ತೀರ್ಮಾನ ಕೈಗೊಂಡಿದೆ ಈ ಬಗ್ಗೆ ತಿರುಚಿ ಕಾಂಗ್ರೆಸ್ಸಿಗರು ಮನಬಂದಂತೆ ಮಾತನಾಡುತ್ತಿದ್ದಾರೆ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಮನಬಂದಂತೆ ಮಾತನಾಡುವುದು ಅವರಿಗೆ ಎಷ್ಟು ಗೌರವ ತರುತ್ತದೆ ಎಂಬುದು ನನಗೆ ಅರ್ಥ ಆಗಿಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನಾದರೂ ವಾಸ್ತವಿಕ ಸಂಗತಿ ತಿಳಿದು ಮಾತನಾಡಲಿ ಕಾಂಗ್ರೆಸ್ಸಿಗರಂತೂ ಮಾಡಲಿಲ್ಲ ನಾವು ಮಾಡಿದ್ದು ಸ್ವಾಗತ ಮಾಡಬೇಕಿತ್ತು ಸುಮ್ಮನೆ ಟೀಕೆ ಮಾಡುವುದು ಸರಿಯಲ್ಲ ಮೀಸಲಾತಿ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.