ಗೃಹ ಸಚಿವ ಆರೋಗ್ಯ ಜ್ಞಾನೇಂದ್ರ ಜನಪ್ರಿಯ ನಾಯಕರು ನಾಳೆ ಬರುವ ಚುನಾವಣೆಯಲ್ಲಿ 40 ರಿಂದ 50,000 ಅಂತರದಲ್ಲಿ ನೀವೆಲ್ಲಾ ಗೆಲ್ಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ನೆಲ ಇದು. ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವಂತಹ ಈ ಕಾರ್ಯಕ್ರಮ ನಿಜಕ್ಕೂ ಅಭೂತಪೂರ್ವ ಎನಿಸಿದೆ. ನಾನು ಲೆಕ್ಕವಿಲ್ಲದಷ್ಟು ಸಲ ತೀರ್ಥಹಳ್ಳಿಗೆ ಬಂದಿದ್ದೇನೆ ಆದರೆ ಇಷ್ಟು ಜನರನ್ನ ಕಾರ್ಯಕ್ರಮ ಒಂದರಲ್ಲಿ ನಾನು ನೋಡಿಲ್ಲ ಎಂದು ಬಣ್ಣಿಸಿದ್ದಾರೆ.
ಈ ತರಹದ ಜನಸ್ತೋಮವನ್ನು ತೀರ್ಥಹಳ್ಳಿಯಲ್ಲಿ ಮೊದಲ ಬಾರಿಗೆ ನೋಡುತ್ತಿದ್ದೇನೆ. ಇದರರ್ಥ ಗೃಹ ಸಚಿವ ಆರಗ್ಯ ಜ್ಞಾನೇಂದ್ರ ಅವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ಸೇರಿದ್ದಾರೆ. ಯಾವುದೇ ಶಕ್ತಿ ಕೂಡ ಆರಗ ಜ್ಞಾನೇಂದ್ರ ಅವರು 40 ರಿಂದ 50,000 ಮತಗಳ ಅಂತರದಿಂದ ಗೆಲ್ಲುವುದನ್ನು ತಡೆಗಟ್ಟಲು ಸಾಧ್ಯವಿಲ್ಲ. ತೀರ್ಥಹಳ್ಳಿಯಲ್ಲಿ 618 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆರಗ ಜ್ಞಾನೇಂದ್ರ ಕೊಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಎಲ್ಲಾ ಕ್ಷೇತ್ರದಲ್ಲಿ ಕೂಡ ಇದೇ ತರಹ ಹಣವನ್ನು ನೀಡಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕೈಜೋಡಿಸುತ್ತಿದ್ದಾರೆ. ಈ ಅಭಿವೃದ್ಧಿ ಕಾರ್ಯಗಳಿಂದ ನಮ್ಮ ಸರ್ಕಾರ ನಿಶ್ಚಿತವಾಗಿ ಮುಂದೆ ಅಧಿಕಾರಕ್ಕೆ ಬರುತ್ತೆ. ಅಧಿಕಾರಕ್ಕೋಸ್ಕರ ಯಾರು ಹಗಲುಗನಸು ಕಾಣುತ್ತಿದ್ದಾರೋ ಅವರ ಕನಸು ನನಸಾಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ನೂರಕ್ಕೆ ನೂರರಷ್ಟು ನಮ್ಮ ಸರ್ಕಾರ ಬಂದೇ ಬರುತ್ತೆ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಷಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದಾ ಕರ್ನಾಟಕಕ್ಕೆ ಬರಲಿದ್ದಾರೆ. ಆ ಸಂದರ್ಭದಲ್ಲಿ ಲಕ್ಷಾಂತರ ಮಂದಿ ಜನರನ್ನ ನಾವು ಸೇರಿಸಲಿದ್ದೇವೆ ಇವತ್ತು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಪೂರ್ಣಗೊಳ್ಳುತ್ತಿದೆ ಎರಡು ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಮಾನ ನಿಲ್ದಾಣ ಸಿದ್ಧವಾದರೆ ಶಿವಮೊಗ್ಗ ತೀರ್ಥಹಳ್ಳಿ ಅಭಿವೃದ್ಧಿಗೆ ಅನುಕೂಲವಾಗುತ್ತೆ. ಕೈಮುಗಿದು ಪ್ರಾರ್ಥನೆ ಮಾಡ್ತೀನಿ, ಇಲ್ಲಿ ಬಂದಿರುವವರು ಕನಿಷ್ಠ 10 ಮತಗಳನ್ನು ಹೆಚ್ಚುವರಿ ಹಾಕಿಸಿದ್ರೆ ಆರಗ ಜ್ಞಾನೇಂದ್ರ ಐವತ್ತು ಸಾವಿರ ಮತಗಳ ಅಂತರದಿಂದ ನಿಶ್ಚಿತವಾಗಿ ಗೆಲ್ತಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಪರೋಕ್ಷವಾಗಿ ಘೋಷಿಸಿದ್ದಾರೆ.