ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈಗಾಗಲೇ ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ಹೆಣೆಯುವುದರಲ್ಲಿ ನಿರತವಾಗಿವೆ.
ಇನ್ನು ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಬಾರಿ ಬಿಜೆಪಿ 140- ರಿಂದ150 ಸ್ಥಾನ ಗೆಲ್ಲುವುದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶಿವಮೊಗ್ಗದ ಶಿಕಾರಿಪುರದ ಆರಾಧ್ಯದೈವ ಹುಚ್ಚರಾಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಬಿಎಸ್‌ವೈ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140ರಿಂದ 150 ಸ್ಥಾನ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ . ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದೂ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.
ಯಾರೋ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತ ಬಡಿದಾಡುತ್ತಿದ್ದಾರೆ, ಕಾಂಗ್ರೆಸ್ ನಲ್ಲಿ ಅದು ಕೇವಲ ತಿರುಕನ ಕನಸಾಗುತ್ತೆ ಹೊರತು ಅದು ಯಾವುದೇ ಕಾರಣಕ್ಕೂ ಸಾಧ್ಯ ಇಲ್ಲ ಅನ್ನೋದು ಅವರಿಗೂ ಸಹ ಮನವರಿಕೆ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಂತವರ ನಾಯಕತ್ವ ನಮಗಿರಬೇಕಾದರೇ ಈ ಚುನಾವಣೆಯಲ್ಲಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.ಎಲ್ಲಾ ಕಾರ್ಯಕರ್ತರು ಬೂತ್ ಬಲ ಪಡಿಸಿ ಮತದಾರರನ್ನು ಮನವಲಿಸಿ ಮತಗಟ್ಟೆಗೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕಿದೆ. ನಾವು ಈ ಸಲ ಜಯಭೇರಿ ಬಾರಿಸಲಿದ್ದೇವೆ ಅನ್ನೋದು ಕಾಂಗ್ರೆಸ್ ನವರಿಗೂ ಸಹ ಮನವರಿಕೆ ಆಗಿದೆ ಹಾಗಾಗಿ ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ ಎರಡ್ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರದಲ್ಲಿ ತೀರ್ಮಾನ ತೆಗೆದುಕೊಳ್ಳುವುರಿದ್ದಾರೆ. ಯಾರನ್ನ ತೆಗೆದುಕೊಳ್ಳಬೇಕು ಎನ್ನುವುದು ಪ್ರಧಾನಿ ,ಕೇಂದ್ರದ ನಾಯಕರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ನಿಂತಿರುವ ನೆಲವೇ ಕುಸಿಯುತ್ತಿದೆ, ಅದರ ಅರಿವಿಲ್ಲದೇ ಬಹಳ ಹಗುರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಾರೆ. ಇದಕ್ಕೆ ತಕ್ಕಪಾಠವನ್ನು ರಾಜ್ಯದ ಜನ ಕಲಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಸಿದ್ದಾರೆ.






