ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ 2022–23ನೇ ಸಾಲಿನ ಬಜೆಟ್ ಬಗ್ಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇದೊಂದು ಶೂನ್ಯ ಬಜೆಟ್ ಆಗಿದೆ. ದುಡಿಯುವ ಹಾಗೂ ಮಧ್ಯಮ ವರ್ಗದವರಿಗೆ ಯಾವುದೇ ಪರಿಹಾರ ಘೋಷಿಸದೇ ದ್ರೋಹ ಎಸಗಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಜೆಟ್ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರದ ಬಜೆಟ್ನಲ್ಲಿ ದುಡಿಯುವ, ಮಧ್ಯಮ, ಬಡ, ಯುವ ಜನಾಂಗ, ರೈತರು ಹಾಗೂ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಂಎಸ್ಎಂಇ) ಉದ್ದಿಮೆಗಳಿಗೆ ಯಾವುದೇ ಲಾಭ ಲಭಿಸಿಲ್ಲ ಎಂದು ಟೀಕಿಸಿದ್ದಾರೆ.