• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ಮಕ್ಕಳಿಗೆ ಬಸ್ ಪಾಸ್ ಸಂಪೂರ್ಣ ಉಚಿತ : ಸಿಎಂ ಬೊಮ್ಮಾಯಿ

Any Mind by Any Mind
May 20, 2022
in ಕರ್ನಾಟಕ
0
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ಮಕ್ಕಳಿಗೆ ಬಸ್ ಪಾಸ್ ನ್ನು ಸಂಪೂರ್ಣ ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ  ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಡಾ: ಬಾಬಾ ಸಾಹೇಬ್ ಅಂಬೇಡ್ಕರ್  ಅವರು ಕರ್ನಾಟದಲ್ಲಿ ಪ್ರವಾಸ ಮಾಡಿದ್ದ ಸ್ಥಳಗಳ ಅಭಿವೃದ್ಧಿಗೆ  ಒಟ್ಟು 20 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ಮಕ್ಕಳಿಗೆ ಬಸ್ ಪಾಸ್ ನ್ನು ಸಂಪೂರ್ಣ ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ. ಸಮಾಜ  ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅನುದಾನವನ್ನು ನೀಡುವುದಲ್ಲದೆ,   ನಿಗಮ ಮಂಡಳಿಗಳಿಗೂ ಅನುದಾನವನ್ನು ಒದಗಿಸಲಾಗಿದೆ. ಅದನ್ನೂ ಹೆಚ್ಚಿಸಬೇಕೆಂದು ಎಲ್ಲರ ಅಭಿಪ್ರಾಯವಿದೆ. ಒಂದು ವಾರದಲ್ಲಿ  ಅನುದಾನ ಹೆಚ್ಚಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿಯ ಶಾಸಕರಿಗೆ ಒಂದು ಕೋಟಿ ರೂ.ಗಳನ್ನು ನೀಡಲಾಗುವುದು. ಹಿಂದಿನ ಸರ್ಕಾರ ಅನುದಾನ ಒದಗಿಸುವುದಾಗಿ ಘೋಷಣೆ ಮಾಡಿತ್ತು.  ಅನುದಾನ ಒದಗಿಸಿ ಕ್ರಿಯಾ ಯೋಜನೆ ರೂಪಿಸಲು ಅನುಮತಿ ನೀಡಲಾಗಿದೆ  ಎಂದರು.

ಗಂಗಾ ಕಲ್ಯಾಣ  ಯೋಜನೆಯಲ್ಲಿ ಭ್ರಷ್ಟಾಚಾರವಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲಾಗುವುದು.  ಯಾರ ಕಾಲದಲ್ಲಿ  ಎಷ್ಟು ಭ್ರಷ್ಟಾಚಾರವಾಗಿದೆ ಎಂಬುದನ್ನು ತನಿಖೆ ನಡೆಸಲಾಗುವುದು ಎಂದು ಹೇಳಿದ್ಧಾರೆ.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 28000 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28000 ಕೋಟಿ ರೂ.ಗಳನ್ನು  ನೀಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಭೆಯಲ್ಲಿ ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಹಾಗೂ ಎಷ್ಟು ಬಾಕಿ ಇದೆ ಎನುವುದನ್ನು  ಸಭೆಯಲ್ಲಿ ಪರಿಶೀಲನೆ ಮಾಡಲಾಗಿದೆ. ಕೆಲವು ಯೋಜನೆಗಳಿಗೆ  ಮಾತ್ರ ಬದಲಾವಣೆ ಮಾಡಿ ಉಳಿದುದಕ್ಕೆ ಅನುಮೋದನೆ ನೀಡಲಾಗಿದೆ. ಬಜೆಟ್ ನಲ್ಲಿ  ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ನಡೆದ ಉನ್ನತ ಮಟ್ಟದ ಪರಿಷತ್ತಿನ ಅನುಮೋದನೆ ದೊರೆತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಗೆ 500 ಕೋಟಿ ರೂ.ಗಳನ್ನು ಹೆಚ್ಚಿಗೆ ನೀಡಲಾಗಿದೆ.  ಕೃಷಿ ಇಲಾಖೆಗೆ 851 ಕೋಟಿ ರೂ.ಗಳಿದ್ದ ಅನುದಾನವನ್ನು 1061 ಕೋಟಿ ರೂ.ಗಳಿಗೆ ಏರಿಸಲಾಗಿದೆ. ತೋಟಗಾರಿಕೆ ಇಲಾಖೆಗೆ 142 ಕೋಟಿಗಳಿದ್ದ  ಅನುದಾನವನ್ನು  187 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಆರೋಗ್ಯ ಇಲಾಖೆಗೆ 899 ಕೋಟಿ ರೂ.ಗಳನ್ನು   ಕಳೆದ ವರ್ಷ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 1,300 ಕೋಟಿ ರೂ.ಗಳನ್ನು   ನೀಡಲಾಗಿದೆ ಎಂದರು. ಸಹಕಾರ ಇಲಾಖೆಯಲ್ಲಿ sc st ಸಮುದಾಯದ ಜನರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿಗಳ ಮೊತ್ತ ಹೆಚ್ಚಳ ಮಾಡಿದ್ದು,  ಕಳೆದ ವರ್ಷ 2,900 ಕೋಟಿ ರೂ.ಗಳಿದ್ದ  ಅನುದಾನವನ್ನು ಈ ಬಾರಿ 3,748 ಕೋಟಿ  ರೂ.ಗಳ  ಅನುದಾನ ಒದಗಿಸಲಾಗಿದೆ. ಕೌಶಲ್ಯಾಭಿವೃದ್ಧಿಗೆ 180 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 9,000 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆÀ ನೀಡಲಾಗಿದೆ ಎಂದು ತಿಳಿಸಿದರು.

Tags: BJPCongress PartyCovid 19ಉಚಿತ ಬಸ್ ಪಾಸ್ನರೇಂದ್ರ ಮೋದಿಪರಿಶಿಷ್ಟ ಜಾತಿಬಿಜೆಪಿಸಿಎಂ ಬೊಮ್ಮಾಯಿ
Previous Post

ಬೆಲೆ ಏರಿಕೆ ವಿಚಾರದಲ್ಲಿ ಬಿಜೆಪಿ ಮಹಿಳಾ ನಾಯಕಿಯರು ಯಾವಾಗ ಧ್ವನಿ ಎತ್ತುತ್ತಾರೆ? :‌ ರಾಜ್ಯ ಮಹಿಳಾ ಕಾಂಗ್ರೆಸ್

Next Post

ಶಾಲಾ ಪಠ್ಯದಲ್ಲಿ ಸೂಲಿಬೆಲೆಯಂತಹ ಅಯೋಗ್ಯರ ಪಾಠ : ರಾಜ್ಯ ಕಾಂಗ್ರೆಸ್‌ ಆರೋಪ

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

June 5, 2026
Next Post
ಶಾಲಾ ಪಠ್ಯದಲ್ಲಿ ಸೂಲಿಬೆಲೆಯಂತಹ ಅಯೋಗ್ಯರ ಪಾಠ : ರಾಜ್ಯ ಕಾಂಗ್ರೆಸ್‌ ಆರೋಪ

ಶಾಲಾ ಪಠ್ಯದಲ್ಲಿ ಸೂಲಿಬೆಲೆಯಂತಹ ಅಯೋಗ್ಯರ ಪಾಠ : ರಾಜ್ಯ ಕಾಂಗ್ರೆಸ್‌ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada