ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದೆ. ವಿಶೇಷ ತನಿಖಾ ತಂಡ (SIT) ತನಿಖೆಯನ್ನು ಪೂರ್ಣಗೊಳಿಸಿ ಶೀಘ್ರದಲ್ಲೇ ಪೊಲೀಸ್ ಕಮಿಷನರ್‌ಗೆ ಸಮಗ್ರ ವರದಿ ಸಲ್ಲಿಸಲು ಸಿದ್ಧವಾಗಿದೆ.

ರಾಯ್ ಆತ್ಮಹತ್ಯೆಯ ಹಿಂದಿನ ನಿಜವಾದ ಕಾರಣಗಳನ್ನು ಪತ್ತೆಹಚ್ಚಲು ಎಸ್‌ಐಟಿ 4 ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ಹೂಡಿಕೆ ವಿಚಾರಗಳು ಹಾಗೂ ಕೌಟುಂಬಿಕ ವಿಷಯಗಳ ಕುರಿತಾಗಿ ವಿವರವಾದ ಪರಿಶೀಲನೆ ನಡೆಸಲಾಗಿದೆ. ಕಚೇರಿ ಸಿಬ್ಬಂದಿ, ಸಂಬಂಧಿತ ಅಧಿಕಾರಿಗಳು, ಐಟಿ ಇಲಾಖೆಯ ಅಧಿಕಾರಿಗಳು, ರಾಯ್ ಕುಟುಂಬ ಸದಸ್ಯರು ಹಾಗೂ ಆಪ್ತರ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

ರಾಯ್ ಆತ್ಮಹತ್ಯೆಗೆ ಮುಖ್ಯ ಕಾರಣವೇನು ಎಂದು ಎಸ್‌ಐಟಿ ಸಲ್ಲಿಸಲಿರುವ ವರದಿ ಮೂಲಕ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರುವ ನಿರೀಕ್ಷೆ ವ್ಯಕ್ತವಾಗಿದೆ.






