• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಾಲಿ ಜನಾರ್ಧನರೆಡ್ಡಿಯನ್ನು ಬಿಜೆಪಿಗೆ ಕರೆತರುತ್ತೇನೆ : ಬಿವೈ ವಿಜಯೇಂದ್ರ

Any Mind by Any Mind
November 20, 2023
in ಕರ್ನಾಟಕ, ರಾಜಕೀಯ
0
ಗಾಲಿ ಜನಾರ್ಧನರೆಡ್ಡಿಯನ್ನು ಬಿಜೆಪಿಗೆ ಕರೆತರುತ್ತೇನೆ : ಬಿವೈ ವಿಜಯೇಂದ್ರ
Share on WhatsAppShare on FacebookShare on Telegram

ADVERTISEMENT

ಮೈಸೂರು ಮತ್ತು ಮಂಡ್ಯ ಜಿಲ್ಲೆ ಪ್ರವಾಸ ಮಾಡಿದ್ದೇನೆ. ಮೈಸೂರು ಜಿಲ್ಲೆಗೂ ನನಗು ಅವಿನಾಭಾವ ಸಂಬಂಧವಿದೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಕೇಂದ್ರದ ವರಿಷ್ಠ ನಾಯಕರು ಅತ್ಯಂತ ಮಹತ್ವದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ನನಗೆ ನೀಡಿದ್ದಾರೆ.ಈ ಹುದ್ದೆಯ ಮಹತ್ವವನ್ನು ಅರಿತುಕೊಂಡು ಪಕ್ಷದ ಹಿರಿಯ ನಾಯಕರು ಹಾಗು ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವುದು ಮೊದಲ ಗುರಿ.
ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರಕೋಟೆಯಾಗಿರುವ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಎರಡನೇ ಗುರಿ.ಲೋಕಸಭೆ, ವಿಧಾನಸಭೆ ಚುನಾವಣೆಗೆ ನೀಡುವ ಮಹತ್ವವನ್ನು ಜಿಲ್ಲಾ ತಾಲ್ಲೂಕು ಪಂಚಾಯತ್ ಚುನಾವಣೆಗೂ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ನಾನೀಗ ಶಿಕಾರಿಪುರ ಕ್ಷೇತ್ರದ ಶಾಸಕನಾಗಿದ್ದೇನೆ.
ಆದರೆ ನನ್ನನ್ನು ರಾಜಕೀಯವಾಗಿ ಗುರ್ತಿಸಿದ್ದು ವರುಣ ಕ್ಷೇತ್ರ. ನನಗೆ ರಾಜಕೀಯ ಅಡಿಪಾಯ ಹಾಕಿಕೊಟ್ಟಿದ್ದು ವರುಣ ಕ್ಷೇತ್ರ. ಮೈಸೂರು ಚಾಮರಾಜನಗರ ಜಿಲ್ಲೆಯ ಜನರ ಆಶೀರ್ವಾದ ನನ್ನ ಮೇಲಿದೆ. ಮುಂಬರುವ ದಿನಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಗೊಳಿಸಲು ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ

ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ.
ಸಣ್ಣಪುಟ್ಟ ಅಸಮಾಧಾನ ಸಹಜ. ಬಸವವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ‌ ಹೊಳಿ, ಅರವಿಂದ್ ಬೆಲ್ಲದ್ ಅವರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ ನಂತರವಷ್ಟೇ ಬಿಜೆಪಿ ಸಭೆಯಿಂದ ಹೊರ ನಡೆದಿದ್ದಾರೆ. ಅವರೆಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ.ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ.ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಗೂಂಡಾಗಿರಿ ಜೋರಾಗಿದೆ

ರಾಜಕೀಯ ಪುಡಾರಿಗಳನ್ನು ಮುಂದೆ ಬಿಟ್ಟು ನಮ್ಮ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ಮಾಡಿಸಿದ್ದಾರೆ. ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ಕ್ರಿಕೆಟ್‌ ಉದ್ಯಮದ ಗೆಲುವೂ ಭಾರತ ತಂಡದ ಸೋಲೂ – ನಾ ದಿವಾಕರ ಅವರ ಬರಹ

Next Post

ಮುರುಘಾ ಶ್ರೀಗಳಿಗೆ ಬಂಧನ ಭೀತಿ: ಮತ್ತೆ ಅರೆಸ್ಟ್ ವಾರೆಂಟ್ ಜಾರಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಮುರುಘಾ ಶ್ರೀಗಳಿಗೆ ಬಂಧನ ಭೀತಿ: ಮತ್ತೆ ಅರೆಸ್ಟ್ ವಾರೆಂಟ್ ಜಾರಿ

ಮುರುಘಾ ಶ್ರೀಗಳಿಗೆ ಬಂಧನ ಭೀತಿ: ಮತ್ತೆ ಅರೆಸ್ಟ್ ವಾರೆಂಟ್ ಜಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada