• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2070ರ ವೇಳೆಗೆ ಆಟೋಮೊಬೈಲ್ ಕ್ಷೇತ್ರ ಸಂಪೂರ್ಣ ವಾಯುಮಾಲಿನ್ಯ ಮುಕ್ತ; ಎಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
November 26, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ:ಪ್ರಧಾನಿ ಮೋದಿ (PM Narendra Modi) ಅವರ ಮೇಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಅಡಿಯಲ್ಲಿ 2070 ರ ವೇಳೆಗೆ ಅಟೋಮೊಬೈಲ್ ಕ್ಷೇತ್ರವನ್ನು ಸಂಪೂರ್ಣ ವಾಯುಮಾಲಿನ್ಯ ಮುಕ್ತಗೊಳಿಸಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ADVERTISEMENT

ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿ ಹಮ್ಮಿಕೊಂಡಿದ್ದ BHEL ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರವು ವಾಹನ ವಲಯದಲ್ಲಿ ಮಾಲಿನ್ಯದ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅನೇಕ ಉಪಕ್ರಮಗಳನ್ನು ಕೈಗೆತ್ತಿಕೊಂಡಿದೆ. ಅದರಲ್ಲಿ ಉತ್ಪಾದನಾ ಸಂಪರ್ಕ ಉತ್ತೇಜನ (PLI) ಮತ್ತು ಯೋಜನೆಗಳು, ಫೇಮ್ (FAME) ಯೋಜನೆಗಳು ಪ್ರಮುಖವಾದವು. ಅಲ್ಲದೆ, ಗ್ರೀನ್ ಹೈಡ್ರೋಜನ್ ಮಿಷನ್‌ನಂತಹ ಕಾರ್ಯಕ್ರಮಗಳು ಭಾರತದ ಉತ್ಪಾದನಾ ಸಾಮರ್ಥ್ಯಗಳಿಗೆ ಗಣನೀಯ ವೇಗವನ್ನು ಒದಗಿಸಿವೆ ಎಂದು ಅವರು ಹೇಳಿದರು.

ಜಾಗತಿಕ ಮಟ್ಟದಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ಅದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸಾಧ್ಯವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.2025ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಆಗುವ ಭಾರತ ಸ್ಪಷ್ಟ ಗುರಿಯನ್ನು ಹೊಂದಿದೆ. ಇದನ್ನು ಸಾಕಾರಗೊಳಿಸುವಲ್ಲಿ ಮತ್ತು ರಾಷ್ಟ್ರದ ಸುಸ್ಥಿರ ಕೈಗಾರಿಕಾ ಅಭಿವೃದ್ಧಿಗೆ ಕೊಡುಗೆ ನೀಡುವಲ್ಲಿ ತಮ್ಮ ಪ್ರಯತ್ನಗಳನ್ನು ಮುಂದುವರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಸಾಧನೆಯನ್ನು ಶ್ಲಾಘಿಸಿದ ಸಚಿವರು; ಕಂಪನಿಯು ಭಾರತೀಯ ಉತ್ಪಾದನಾ ವಲಯಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ. 1964 ರಿಂದಲೂ ಕಂಪನಿಯು ದೇಶದ ಅಭಿವೃದ್ಧಿಗೆ ನಿರ್ಣಾಯಕ ಕೊಡುಗೆ ಕೊಟ್ಟಿದೆ ಎಂದು ಅವರು ಹೇಳಿದರು.

ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ, ಜಂಟಿ ಕಾರ್ಯದರ್ಶಿ ವಿಜಯ ಮಿತ್ತಲ್, BHEL ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವ ಮೂರ್ತಿ, ನಿರ್ದೇಶಕ ಜಯಪ್ರಕಾಶ್ ಶ್ರೀವಾತ್ಸವ ಮುಂತಾದವರು ಉಪಸ್ಥಿತರಿದ್ದರು.

Tags: BHELBHEL Chairman - Managing Director K. Sadashiva MurthyBy 2070 automobile sector pollutionDirector Jayaprakash Srivatsava .FAMEJoint Secretary Vijaya MittalMinistry of Heavy Industries Secretary Kamran RizviNew DelhiUnder Prime Minister Modi'sUnion minister HD Kumaraswamy
Previous Post

10 ವರ್ಷಗಳಲ್ಲಿ ವಿಆರ್‌ಎಸ್‌ ಪಡೆದ 853 ಐಆರ್‌ಎಸ್‌ ಅಧಿಕಾರಿಗಳು

Next Post

ನಕಲಿ ಮತದಾರ ಹೆಸರು ಪಟ್ಟಿಯಲ್ಲಿ ಸೇರ್ಪಡೆ;ನಿರ್ದೇಶನ ನೀಡಲು ಕೋರಿದ ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ನಕಲಿ ಮತದಾರ ಹೆಸರು ಪಟ್ಟಿಯಲ್ಲಿ ಸೇರ್ಪಡೆ;ನಿರ್ದೇಶನ ನೀಡಲು ಕೋರಿದ ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ನಕಲಿ ಮತದಾರ ಹೆಸರು ಪಟ್ಟಿಯಲ್ಲಿ ಸೇರ್ಪಡೆ;ನಿರ್ದೇಶನ ನೀಡಲು ಕೋರಿದ ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada