ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಎಲ್ಲಾ 14 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವನ್ನ ಯಡಿಯೂರಪ್ಪ (BS Yediyurappa) ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಮಾತನಾಡಿದ ಅವರು , ಫಲಿತಾಂಶದ ನಂತರ ಕಾಂಗ್ರೆಸ್ ಗೆ (Congress) ಬುದ್ಧಿ ಬರಲಿದೆ ಎಂದಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ(BSY) , ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ (BY Raghavendra) ಬರೋಬ್ಬರಿ 2.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಪುತ್ರನ ಗೆಲುವಿನ ಬಗ್ಗೆ ಆತ್ಮವಿಶ್ವಾಸದ ಮಾತುಗಳನ್ನಾಡಿದರು. ಕೇವಲ ಶಿವಮೊಗ್ಗ ಮಾತ್ರವಲ್ಲ, ಎಲ್ಲಾ 14 ಕ್ಷೇತ್ರಗಳ ಪೈಕಿ ಒಂದೆರಡು ಬಿಟ್ಟು ಉಳಿದೆಲ್ಲಾ ಕ್ಷೇತ್ರಗಳನ್ನ ಗೆಲ್ಲಲಿದ್ದೇವೆ ಎಂದು ಹೇಳಿದ್ರು.
ಶಿಕಾರಿಪುರದ (Shikaripura) ತಮ್ಮ ನಿವಾಸದಿಂದ ಹೊರಟ ಯಡಿಯೂರಪ್ಪ, ಕುಟುಂಬ ಸಮೇತರಾಗಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ , ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ , ನೇರವಾಗಿ ಮತಗಟ್ಟೆಗೆ (voting booth ) ತೆರಳಿ ಮತದಾನದಲ್ಲಿ ಭಾಗವಹಿಸಿದ್ರು. ಒಟ್ಟಾರೆ ೨೮ರ ಪೈಕಿ ೨೪ರಿಂದ ೨೬ರಲ್ಲಿ ಗೆಲುವು ಖಚಿತ ಎಂಬ ವಿಶ್ವಾಸದಲ್ಲಿ BSY ಇದ್ದಾರೆ.