
ಬೆಂಗಳೂರು : ಉಪಚುನಾವಣೆ ನಡೆದ ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈ ಪೈಕಿ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಯಾಸಿರ್ ಖಾನ್ ಪಠಾಣ್ ಭರ್ಜರಿ ಗೆಲುವು ಸಾಧಿಸಿದ್ದಾರೆ.ಈ ಮೂಲಕ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಕಾಂಗ್ರೆಸ್ ಕೈವಶ ಮಾಡಿಕೊಂಡಿದೆ.