ಬೆಂಗಳೂರು (Bengaluru) ಇನ್ನೆರಡ್ಮೂರು ವರ್ಷಗಳು ಕಳೆದ್ರೂ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ,ಆ ದೇವರೇ ದರೆಗಿಳಿದು ಬಂದರೂ ಬೆಂಗಳೂರಿನ ಟ್ರಾಫಿಕ್ (Bengaluru Traffic) ಸಮಸ್ಯೆಯನ್ನು ಸರಿಪಡಿಸಲು ಸಾಧ್ಯವಿಲ್ಲ ಎಂಬ ಡಿಕೆಶಿ (Dk) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಪ್ರತಿಕ್ರಿಯಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಅವರು ಬೆಂಗಳೂರಿನ ಉಸ್ತುವಾರಿ ಸಚಿವರಿದ್ದಾರೆ. ಅವರು ಬೆಂಗಳೂರನ್ನು ಅಭಿವೃದ್ಧಿ ಮಾಡಲು ಜನ ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದ್ರೆ ಡಿಕೆ ಶಿವಕುಮಾರ್ ಈ ರೀತಿ ಮಾತನಾಡಲು ನಾಚಿಕೆಯಾಗಬೇಕು ಎಂದಿದ್ದಾರೆ.

ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟಿದ್ದೇವೆ ಅಂತ ಇವರೇ..ಇದೇ ಡಿಕೆ ಶಿವಕುಮಾರ್ ಹೇಳಿದ್ದು. ಈಗ ನೋಡಿದ್ರೆ ಆಗುತ್ತಿಲ್ಲ ಎನ್ನುತ್ತಿದ್ದಾರೆ.ಇವರ ಯೋಗ್ಯತೆಗೆ ಮೊದಲು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲಿ ಎಂದು ಬಿವೈ ವಿಜಯೇಂದ್ರ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.