• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

PSI ನೇಮಕಾತಿ ಅಕ್ರಮ ಒಪ್ಪಿಕೊಂಡ ಆರಗ ಜ್ಞಾನೇಂದ್ರ ಯಾವ ನೈತಿಕತೆಯಿಂದ ಸಚಿವ ಸ್ಥಾನದಲ್ಲಿ ಮುಂದುವರಿಯುತ್ತಾರೆ?  ಸಿದ್ದಾರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 30, 2022
in ಕರ್ನಾಟಕ
0
ಬಿಜೆಪಿ ಶಾಸಕರಿಂದ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕುವಂತೆ ಒತ್ತಡ : ಸಿದ್ದರಾಮಯ್ಯ ಗಂಭೀರ ಆರೋಪ!
Share on WhatsAppShare on FacebookShare on Telegram

ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಎಂದುಪ್ರಶ್ನಿಸಿದ್ದಾರೆ.

ADVERTISEMENT

ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು‌ ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ ‘ಚೌಕಿದಾರ’ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು ಎಂದು ಹೇಳಿದ್ದಾರೆ.

ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐ ಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ.  ಪಿಎಸ್ಐ ನೇಮಕಾತಿಗೆ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ  ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ? ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ‌ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಪೋಟಕ ಸಂಗತಿಗಳೇನಿದೆ? ಈ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಸಾಲು ಸಾಲು ಪ್ರಶ್ನೆಳನ್ನು ಸರ್ಕಾರದ ಮುಂದಿಸಿದ್ದಾರೆ.

ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್‌ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ.

ಭ್ರಷ್ಟಾಚಾರ, ಅಪ್ರಾಮಾಣಿಕತೆ  ಮತ್ತು ನಿಷ್ಕ್ರಿಯತೆಯನ್ನು  ಪ್ರಶ್ನಿಸದೆ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ-ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್‌ಐ ನೇಮಕಾತಿ ಅಕ್ರಮ ಸಾಕ್ಷಿ.

Tags: BJPCongress PartyCovid 19PSI ನೇಮಕಾತಿ ಅಕ್ರಮಆರಗ ಜ್ಞಾನೇಂದ್ರಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೊಳದ ಮಠದ ಸ್ವಾಮೀಜಿ ಶಿವೈಕ್ಯ

Next Post

PSI ಹುದ್ದೆ ಮಾತ್ರವಲ್ಲ KPSC ನೇಮಕದಲ್ಲೂ ವ್ಯಾಪಕ ಭ್ರಷ್ಟಾಚಾರ :‌ ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
SP, DC ಹಣ ಕೊಟ್ಟು ವರ್ಗಾವಣೆ ಆಗುವ ಪರಿಸ್ಥಿತಿಗೆ ಮಾಜಿ ಸಿಎಂ ಮಗನೇ ಕಾರಣ : ಯತ್ನಾಳ್ ಆರೋಪ

PSI ಹುದ್ದೆ ಮಾತ್ರವಲ್ಲ KPSC ನೇಮಕದಲ್ಲೂ ವ್ಯಾಪಕ ಭ್ರಷ್ಟಾಚಾರ :‌ ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada