ಇಂದು ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆ ತನಕ ಮತದಾನ ಮುಂದುವರೆಯಲಿದ್ದು, ಮತದಾರ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ.

ಡಿಸಿಎಂ ಡಿಕೆ ಶಿವಕುಮಾರ್ , ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ಪ್ರತಿಷ್ಠೆಯ ಕಣವಾಗಿ ಚನ್ನಪಟ್ಟಣ ಕ್ಷೇತ್ರ ಮಾರ್ಪಾಡಾಗಿದ್ದು, ಇಷ್ಟೂ ದಿನಗಳ ಕಾಲ ಜಿದ್ದಾಜಿದ್ದಿನ ಹೋರಾಟ, ಪ್ರಚಾರದ ಭರಾಟೆ ಎಲ್ಲವೂ ಮುಗಿದಿದ್ದು, ಅಂತಿಮವಾಗಿ ಮತದಾರ ಯಾರನ್ನು ಆರಿಸಿಕೊಳ್ಳಲಿದ್ದಾನೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇನ್ನು ಸಂಡೂರು ಮತ್ತು ಶಿಗ್ಗಾವಿಯಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಟೈಟ್ ಫೈಟ್ ಇದ್ದು, ಸಿಎಂ ಸೇರಿದಂತೆ ಘಟಾನುಘಟಿ ನಾಯಕರೇ ಅಖಾಡಕ್ಕಿಳಿದು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ. ಇಂದು ಸಂಜೆಯ ತನಕ ಮತದಾನ ನಡೆಯಲಿದ್ದು ನವೆಂಬರ್ 23 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.




