ನನ್ನನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಯಾರ ಬಳಿಯೂ ಕೇಳಿರಲಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಯಡಿಯೂರಪ್ಪನವರು ನಾಲ್ಕು ಭಾರೀ ಮುಖ್ಯಮಂತ್ರಿಯಾಗಿದ್ದಾಗಲೂ ಉತ್ತಮ ಕೆಲಸ ಮಾಡಿದ್ದಾರೆ ರೈತರಿಗೆ ಪ್ರತ್ಯೇಕ ಬಜೆಟ್, ಸಾಲ ಮನ್ನಾ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರ ಹಾಗೆ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿ ಯೋಜನೆಗಳನ್ನು ಜಾರಿ ಮಾಡಿ ಕಂಡ ಕಂಡ ಕಡೆ ಬೊಬ್ಬೆ ಹೊಡೆಯುತ್ತಿಲ್ಲ ಅಥವಾ ಯಾರದ್ದೋ ಯೋಜನೆಗೆ ನಮ್ಮ ಫೋಟೋ ಹಾಕಿಕೊಂಡು ಬಿಟ್ಟಿ ಪ್ರಚಾರ ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿ ಗೆಲ್ಲುವುದಿಲ್ಲ ಎಂಬ ಅಂಶ ತಿಳಿದಿದ್ದರೂ ಸಹ ಕಾಂಗ್ರೆಸ್ ನಾಯಕರು ಆತ್ಮ ಸಾಕ್ಷಿ ಬಗ್ಗೆ ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದ ಶಾಸಕರು ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಲಿದ್ದು ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಅಭೂತಪೂರ್ವ ಜಯ ಸಾಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಆರ್ ಎಸ್ ಎಸ್ ಕುರಿತು ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂತಹ ಹೇಳಿಕೆಗಳು ಶೋಭೆ ತರುವುದಿಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರತಿಯೊಬ್ಬ ಸದಸ್ಯನೂ ಸಹ ಸೇವೆ ಎಂಬ ಯಜ್ಞಧಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾನೆ. ಈ ವಿಚಾರ ಕಾಂಗ್ರೆಸ್ ಮುಖಂಡರಿಗೆ ಅಷ್ಟಾಗಿ ತಿಳಿದಿಲ್ಲ ಎಂದು ಕಾಣುತ್ತದೆ ಮುಂದಿನ ದಿನಗಳಲ್ಲಿ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.