ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್(CJ Roy) ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ.

ಸಿ.ಜೆ.ರಾಯ್ ಆತ್ಮಹತ್ಯೆ ಸಂಬಂಧ ಅಶೋಕ್ ನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಮೃತ ವ್ಯಕ್ತಿ ದೊಡ್ಡ ಉದ್ಯಮಿಯಾಗಿರುವ ಕಾರಣ ಆತ್ಮಹತ್ಯೆ ತನಿಖೆಗೆ SIT ನೇಮಕ ಮಾಡಲಾಗಿದೆ.

ಪಶ್ಚಿಮ ವಿಭಾಗ ಜಂಟಿ ಪೊಲೀಸ್ ಆಯುಕ್ತ ವಂಶಕೃಷ್ಣ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದ್ದು, ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಬಿ.ಜಗಲಾಸರ್ ರನ್ನ ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಜತೆಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಚೀಂದ್ರ ಹಾಗೂ ಕೆಲವು ಅಧಿಕಾರಿಗಳು, ಸಿಬ್ಬಂದಿಯನ್ನ ತಂಡಕ್ಕೆ ನಿಯೋಜಿಸಲಾಗಿದೆ.

ಎಸ್ ಐಟಿ ರಚನೆ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಲವು ಮಾಹಿತಿ ಕಲೆಹಾಕಿದ್ದಾರೆ.













