ಸಿಎಂ ಬದಲಾವಣೆ ವಿಷಯ ಬಂದರೆ ನನ್ನ ನಿರ್ಧಾರವನ್ನು ನಾಲ್ಕು ಗೋಡೆ ಮಧ್ಯೆ ತಿಳಿಸುತ್ತೇನೆ: ಸಚಿವ ಸಿಪಿ ಯೋಗೇಶ್ವರ್

ರಾಜ್ಯದಲ್ಲಿ ಇರುವುದು ಶುದ್ಧ ಬಿಜೆಪಿ ಸರ್ಕಾರವಲ್ಲ, ಇದು ಬಿಜೆಪಿಯಾಗಿ ಉಳಿದಿಲ್ಲ. ಇದು ಮೂರು ಸರ್ಕಾರ ಆಗಿದೆ ಮತ್ತು ನನ್ನ ಕೆಲಸದಲ್ಲಿ ಬೇರೆಯವರಯ ಮೂಗು ತೂರಿಸಿದರೆ ಹೇಗೆ? ಎಂದು ಪರೋಕ್ಷವಾಗಿ ವಿಜೇಯೇಂದ್ರ ಕುರಿತು ಸಚಿವ ಸಿಪಿ ಯೋಗೇಶ್ವರ್​ ಆಕ್ಷೇಪ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯೋಗೇಶ್ವರ್, ಸಿಎಂ ,ಬದಲಾವಣೆ ಬಗ್ಗೆ ಮಾತನಾಡಿದ ಅವರು, ಆ ಸಂದರ್ಭ ಬಂದಾಗ ಚರ್ಚೆ ಮಾಡ್ತೇನೆ. ನಮ್ಮ ಬೆಂಬಲ ಇದೀಯೋ ಇಲ್ವೋ ಅನ್ನೋದನ್ನು ನಾಲ್ಕು ಗೋಡೆ ಮಧ್ಯೆ ತಿಳಿಸುತ್ತೇನೆ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ನಾನೊಬ್ಬ ಸಚಿವ ಇವತ್ತು ನನ್ನ ಸಚಿವಗಿರಿಯನ್ನು ನನ್ ಮಗ ಚಲಾಯಿಸಿದ್ರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸೋದು ಇಷ್ಟವಿಲ್ಲ ಎನ್ನುವ ಮೂಲಕ ಬಿ ವೈ ವಿಜಯೇಂದ್ರ ಹಸ್ತಕ್ಷೇಪ ಬಗ್ಗೆ ಪರೋಕ್ಷವಾಗಿ ಸಿಪಿವೈ ಆಕ್ಷೇಪ ಮಾಡಿದ್ದಾರೆ.

ಮುಂದುವರೆದ ಸಿಪಿವೈ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡ್ಕೊಂಡಿವೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆ ಹೊಂದಾಣಿಕೆ ಮಾಡ್ಕೊಂಡಿದೆ ನಮ್ಮ ಸರ್ಕಾರ ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಬದಲಾವಣೆ ನನ್ನ ಮೂಲ ಉದ್ದೇಶ ಅಲ್ಲ. ಅಷ್ಟೊಂದು ಶಕ್ತಿ ನನಗೆ ಇಲ್ಲ. ಆ ಅಭಿಪ್ರಾಯವೂ ನನಗೆ ಇಲ್ಲ ಎಂದರು.

Related posts

Latest posts

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಕೊರೊನಾ ಸೋಂಕಿನಿಂದ ಉಂಟಾದ ಹಲವಾರು ಸಮಸ್ಯೆಗಳಿಂದ ಕೊನೆಯುಸಿರೆಳೆದಿದ್ದಾರೆ. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ತಮ್ಮ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ತಿಂಗಳು ಮಿಲ್ಖಾ ಸಿಂಗ್ ಅವರಿಗೆ...

ಒಂದೇ ದಿನದಲ್ಲಿ ಎರಡು ವಿವಿಧ ಕೋವಿಡ್-19 ಲಸಿಕೆಗಳನ್ನು ಪಡೆದ ಬಿಹಾರದ ಮಹಿಳೆ

ಬಿಹಾರದ 63 ವರ್ಷದ ಮಹಿಳೆಗೆ ಒಂದೇ ದಿನದಲ್ಲಿ ಎರಡು ವಿಭಿನ್ನ ಕಂಪನಿಯ ಕರೋನ ಲಸಿಕೆ ನೀಡಲಾಗಿದೆ. ಅವರು ಈಗ ವೈದ್ಯರ ನಿಗದಲ್ಲಿದ್ದು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಬಿಹಾರದ ಮಹಿಳೆ ಸುನಿಲಾ ದೇವಿ ಎಂಬುವವರಿಗೆ ಜೂನ್ 16...

ಮಸೀದಿಗೆ ಜಾಗ ದಾನ ನೀಡಿದ ಸಿಖ್ ವ್ಯಕ್ತಿ: ಮಸೀದಿಯಲ್ಲಿ ಕಾರ್ಯಕ್ರಮ ಆಯೋಜಿಸಿದ ಗುರುದ್ವಾರ

ಕೋಮು‌‌ ಸಂಘರ್ಷಗಳು, ಪ್ರಚೋದನೆಗಳು ಮತ್ತು ವಿಭಿನ್ನ ಕೋಮಿನ ಜನರ ಮೇಲೆ ವಿನಾಕಾರಣ ಹಲ್ಲೆ, ಕೊಲೆ ನಡೆಯುವ ವಿದ್ಯಮಾನಗಳ ನಡುವೆ ಪಂಜಾಬಿನ‌ ಎರಡು ಜಿಲ್ಲೆಗಳು ಕೋಮುಸಾಮರಸ್ಯವನ್ನು ಉತ್ತೇಜಿಸುವಂತಹ ಘಟನೆಗೆ ಸಾಕ್ಷಿಯಾಗಿವೆ. ಸ್ವಾಭಿಮಾನಕ್ಕೆ, ಕೆಚ್ಚೆದೆಗೆ ಹಠಕ್ಕೆ...