ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಅವರನ್ನು ತೆಗೆದುಹಾಕಲಾಗಿದೆ ಎಂದು ಮಾಧ್ಯಮಗಳು ಶನಿವಾರ (ಜು.29) ವರದಿ ಮಾಡಿವೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಅನ್ವಯ ರವಿ ಅವರನ್ನು ಆ ಹುದ್ದೆಯಿಂದ ತೆರವುಗೊಳಿಸಲಾಗಿದೆ. 8 ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.
13 ನಾಯಕರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಖಾಲಿ ಆಗಿದ್ದ ಬಹುತೇಕ ಡ್ಯಾಂಗಳು ಭರ್ತಿ ಆಗಿದ್ದು ಹೇಗೆ..?
ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೊಸ ನಾಯಕರ ನೇಮಕದ ಪತ್ರವನ್ನು ಹಂಚಿಕೊಂಡಿದೆ.
ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಕೊಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.