• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಕುರಿತ ವಿಚಾರಣಾ ಆಯೋಗದ ವರದಿ ಬಗ್ಗೆ ಸಚಿವಸಂಪುಟ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
April 11, 2025
in Top Story, ಇದೀಗ, ದೇಶ, ರಾಜಕೀಯ, ವಿದೇಶ, ವಿಶೇಷ
0
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಕುರಿತ ವಿಚಾರಣಾ ಆಯೋಗದ ವರದಿ ಬಗ್ಗೆ ಸಚಿವಸಂಪುಟ ಚರ್ಚೆ
Share on WhatsAppShare on FacebookShare on Telegram

ಆಯೋಗದ ವರದಿ ಆಧರಿಸಿ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ ರಚನೆಗೆ ನಿರ್ಧಾರ

ADVERTISEMENT

ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸುವುದಾಗಿ ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಟಿ ನಡೆಸಿ ಸಚಿವ ಸಂಪುಟ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ವಿಚಾರಣಾ ಆಯೋಗ ದೂರುಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. 3 ಲಕ್ಷ ಕಾಮಗಾರಿಗಳಲ್ಲಿ ಪೈಕಿ ಆಯೋಗವು 1729 ಕಾಮಗಾರಿಗಳ ಬಗ್ಗೆ ವಿಸ್ತೃತವಾಗಿ ಪರಿಶೀಲನೆ ನಡೆಸಲಾಗಿದೆ. ಕೆಲವುಗಳಲ್ಲಿ ಕಾಮಗಾರಿಗಳಲ್ಲಿ ಅನುದಾನಕ್ಕಿಂತ ಹೆಚ್ಚು ಕಾಮಗಾರಿಯನ್ನು ನೀಡಲಾಗಿದೆ. ಕೆಲವುಗಳಲ್ಲಿ ಅಲ್ಪ ಅನುದಾನ ಬಿಡುಗಡೆಯಾಗಿದ್ದರೂ, ಅದಕ್ಕೂ ಮೀರಿದ ಪಾವತಿಯಾಗಿದೆ. ಕೆಲವುಗಳಲ್ಲಿ ಕಾಮಗಾರಿ ನಿರ್ವಹಿಸಿರುವುದರ ಬಗ್ಗೆ ಸಂಶಯವಿದೆ. ಕೆಲವುಗಳಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಬೇರೆಯವರಿಂದ ಹಸ್ತಕ್ಷೇಪವಾಗಿರುವುದನ್ನು ಆಯೋಗವು ಮಾಹಿತಿ ತಿಳಿಸಿದೆ. ಸಚಿವ ಸಂಪುಟ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ವಿಚಾರಣಾ ಆಯೋಗದ ವರದಿಯ ಮೇಲೆ ಎಸ್ ಐ ಟಿಯನ್ನು ರಚಿಸಲು ನಿರ್ಧರಿಸಲಾಗಿದ್ದು, ಇದರಲ್ಲಿ ಅಗತ್ಯವಿರುವ ಪರಿಣಿತರನ್ನು ನಿಯೋಜಿಸಿ, ಎರಡು ತಿಂಗಳಲ್ಲಿ ವರದಿಯನ್ನು ಸಲ್ಲಿಸಲು ಎಸ್ ಐ ಟಿಗೆ ಸೂಚನೆ ನೀಡಲು ಸಚಿವಸಂಪುಟ ತೀರ್ಮಾನ ಕೈಗೊಂಡಿದ್ದು ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಅಪೂರ್ಣ ಮಾಹಿತಿಗಳಿರುವ ಬಗ್ಗೆ ವಿಚಾರಣಾ ಆಯೋಗ ತಿಳಿಸಿರುವುದರಿಂದ, ಸಂಬಂಧಪಟ್ಟ ಇಲಾಖೆಯವರೂ ಎಸ್ ಐ ಟಿ ಯವರು ಈ ಬಗ್ಗೆ ಕೇಳುವ ಮಾಹಿತಿಗಳನ್ನು ಒದಗಿಸಲು ಸೂಚನೆಯನ್ನು ನೀಡಲಾಗಿದೆ ಎಂದರು.

40% ಕಮೀಷನ್‌ನ ವಿಚಾರ ವರದಿಯಲ್ಲಿ ಉಲ್ಲೇಖಿಸಲಾಗಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ಲಂಚ ವ್ಯವಹಾರ ನಡೆದಿರುವ ಬಗ್ಗೆ ಆಯೋಗದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ದೂರು ಬಂದಿರುವ ಇಲಾಖೆಗಳ ಕಾಮಗಾರಿಗಳ ಬಗ್ಗೆ ಆಯೋಗವು ಪರಿಶೀಲನೆ ನಡೆಸಿದೆ. ಆಯೋಗವು ಗುತ್ತಿಗೆದಾರ ದೂರುಗಳನ್ನು ಪರಿಗಣಿಸಿ, ವಿಚಾರಣೆ ನಡೆಸಿದೆ ಎಂದರು.

Tags: #bjp#CabinetMeeting#CasteCensus#congress#KantharajCommissionReport#NChaluvarayaSwamyBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಣ್ಣಾಮಲೈ ಸ್ಥಾನಕ್ಕೆ ಹೊಸ ನಾಯಕ..! ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾ‌ರ್ ನಾಗೇಂದ್ರನ್ ಆಯ್ಕೆ 

Next Post

ಅಮೆರಿಕದಿಂದ ಶೇ.145 ಸುಂಕ ..! ಪ್ರತಿಯಾಗಿ ಶೇ.125 ಗೆ ಸುಂಕ ಏರಿಸಿದ ಚೀನಾ ..! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಅಮೆರಿಕದಿಂದ ಶೇ.145 ಸುಂಕ ..! ಪ್ರತಿಯಾಗಿ ಶೇ.125 ಗೆ ಸುಂಕ ಏರಿಸಿದ ಚೀನಾ ..! 

ಅಮೆರಿಕದಿಂದ ಶೇ.145 ಸುಂಕ ..! ಪ್ರತಿಯಾಗಿ ಶೇ.125 ಗೆ ಸುಂಕ ಏರಿಸಿದ ಚೀನಾ ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada