
ಹೊಸ ವರ್ಷದ ಮೊದಲ ದಿನ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪಕ್ಷದ ನಾಯಕರು, ಹೈಕಮಾಂಡ್ ಜತೆ ಚರ್ಚಿಸಿದ ನಂತರ ಮುಂದಿನ ದಿನಗಳಲ್ಲಿ ಸಂಪುಟ ಪುನರ್‌ರಚನೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಅವರ ಹೇಳಿಕೆಯಿಂದ ರಾಜ್ಯ ಸಂಪುಟ ಪುನರ್‌ರಚನೆ ಮತ್ತೆ ಮುನ್ನೆಲೆಗೆ ಬಂದಿದೆ. ಇನ್ನು ಮಾಜಿ ಸಚಿವ ನಾಗೇಂದ್ರ ಅವರು, ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ, ಈಗಲೇ ಅಲ್ಲ ಎಂದು ಸಿಎಂ ಹೇಳಿದ್ದಾರೆ.