• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ:ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹಾಸನ: ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಹಾಸನಾಂಬ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಹೇಮಾವತಿ ಜಲಾಶಯದ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಲು ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡಲಿದೆ. ಹಾಸನ ವಿಮಾನ ನಿಲ್ದಾಣ ತ್ವರಿತವಾಗಿ ಪೂರ್ಣಗೊಳಿಸಲಾಗುವುದು.ಹಾಸನ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿಗಾಗಿ ಅವಶ್ಯಕ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳು ಸಲ್ಲಿಸಿದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿಒಳ್ಳೆ ಮಳೆ ಬೆಳೆಯಾಗಿದ್ದು, ಎಲ್ಲಾ ಜಲಾಶಯಗಳು ತುಂಬಿವೆ. ಜಲಾಶಯಗಳಲ್ಲಿ ಶೇ. 90 ರಷ್ಟು ನೀರು ತುಂಬಿದೆ ಎಂದರು. ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವುದು ನಮ್ಮೆಲ್ಲರ ಕರ್ತವ್ಯ. 2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿದ್ದಾಗ , ಬಡವರ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿತ್ತು. 2023 ರಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾದಾಗ, ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ಜಾತಿ ಧರ್ಮದ ಭಾಷೆಯ ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಮಾಡಲಾಗಿದೆ ಎಂದರು.

ಟೀಕೆಗಳನ್ನು ಮೆಟ್ಟಿ ನಿಂತು ಗ್ಯಾರಂಟಿಗಳ ಜಾರಿ:

ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಈ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ , ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕಿಸಿದ್ದವು. ಆ ಎಲ್ಲ ಟೀಕೆಗಳನ್ನು ಮೆಟ್ಟಿ ನಿಂತು, ಗ್ಯಾರಂಟಿಗಳನ್ನು ಜಾರಿ ಮಾಡಿ , ಬಡವರಿಗೆ ಶಕ್ತಿ ತುಂಬಲಾಗಿದೆ. ಬಡವರು ಖುಷಿಯಾಗಿದ್ದು, ಸಮಾಧಾನದಿಂದ್ದಾರೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಸಮಾಧಾನವಾದಂತಿಲ್ಲ. ನಮ್ಮ ಸರ್ಕಾರ ಬಡವರ ಪರವಾಗಿ , ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದು, ಸಾಮಾಜಿಕ ನ್ಯಾಯ ಹಾಗೂ ಬಡವರ ಪರವಾಗಿಲ್ಲದವರಿಗೆ ಇದರಿಂದ ಸಮಾಧಾನವಿಲ್ಲದಂತಾಗಿದೆ ಎಂದರು.

ದ್ವೇಷ ಬಿತ್ತುವವರಿಗೆ ತಕ್ಕ ಶಾಸ್ತಿಯಾಗಬೇಕು:

ನಾನು ಎರಡನೇ ಬಾರಿಗೆ ಹಾಸನಾಂಬ ದೇವಿ, ಸಿದ್ದೇಶ್ವರಸ್ವಾಮಿ, ಗಣಪತಿ ದೇವರ ದರ್ಶನವನ್ನು ಪಡೆದು, ರಾಜ್ಯದ ಎಲ್ಲ ಜನತೆಗೆ ಸನ್ಮಂಗಳ ಉಂಟು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಮನುಜರಾಗಿ ಪರಸ್ಪರ ದ್ವೇಷ ಇರಬಾರದು. ಸಮಾಜದಲ್ಲಿ ದ್ವೇಷವನ್ನು ಬಿತ್ತುವಂತಹ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಶಾಸ್ತಿ ಮಾಡುವಂತೆ ದೇವರನ್ನು ಕೋರಿದ್ದೇನೆ. ಈ ಬಾರಿ ದಸರಾ ಉತ್ಸವದಂತೆ ಹಾಸನಾಂಬ ಜಾತ್ರೆಯನ್ನೂ ಅದ್ದೂರಿಯಾಗಿ ಆಯೋಜಿಸಲಾಗಿದೆ. ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಬೇಕು ಎಂದರು.

ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು:ಹಾಸನದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಭಿನಂದಿಸಿದರು. ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿದಾಗ ಮಾತ್ರು ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.

Tags: Cabinet resolution to upgrade HassanCM Siddaramaiah‌Congress PartyCouncil to Municipal Corporationgovernment schemes
Previous Post

ಚಡ್ಡಿ ಬುದ್ಧಿ ತೋರಿಸಿದ ಶಾಸಕ.. ಮುಸ್ಲಿಮರ ಆಕ್ರೋಶ

Next Post

ರೈತರ ಜಮೀನು ಸಂಪೂರ್ಣ ಸುರಕ್ಷಿತ ; ಬಿಜೆಪಿ ಬೇಕೆಂದೇ ರಾಜಕೀಯ ಮಾಡುತ್ತಿದೆ:ಸಚಿವರ ವಾಗ್ದಾಳಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ರೈತರ ಜಮೀನು ಸಂಪೂರ್ಣ ಸುರಕ್ಷಿತ ; ಬಿಜೆಪಿ ಬೇಕೆಂದೇ ರಾಜಕೀಯ ಮಾಡುತ್ತಿದೆ:ಸಚಿವರ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada